ಬೆಂಗಳೂರು : ಈಗಾಗಲೇ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಪ್ರಯಾಣದ ಹಾಗೂ ಮೆಟ್ರೋ ಪ್ರಯಾಣದ ದರ ಹೆಚ್ಚಳ ಮಾಡಿ ರಾಜ್ಯದ ಜನತೆಗೆ ಸರ್ಕಾರ ಶಾಕ್ ನೀಡಿದೆ. ಇದರ ಬೆನ್ನಲ್ಲೇ ಗಾಯದ ಮೇಲೆ ಬರೆ ಎಳೆದಂತೆ ಶೀಘ್ರದಲ್ಲಿ ನಂದಿನಿ ಹಾಲಿನ ದರ ಏರಿಕೆ ಆಗಲಿದೆ. ಅಧಿವೇಶನದ ಬಳಿಕ ನಂದಿನಿ ಹಾಲಿನ ದರ ಏರಿಕೆ ಆಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಾಲಿನಗರ ಏರಿಕೆ ಆಗಲಿದೆ. ಹೆಚ್ಚಳ ಮಾಡಿರುವ ಹಾಲಿನ ದರದ ಹಣ ರೈತರಿಗೆ ಹೋಗಲಿದೆ. ವಿಧಾನಮಂಡಲ ಅಧಿವೇಶನ ನಡೆಯುವ ಸಂದರ್ಭದಲ್ಲಿ ಅಥವಾ ಅಧಿವೇಶನ ಮುಗಿದ ಬಳಿಕ ನಂದಿನಿ ಹಾಲಿನ ದರ ಏರಿಕೆಯಾಗಲಿದೆ ಎಂದು ಬೆಂಗಳೂರಿನಲ್ಲಿ ಕೆಎಂಎಫ್ ಅಧ್ಯಕ್ಷ ಅಭಿಮಾನಿ ಹೇಳಿಕೆ ನೀಡಿದರು.