ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರನ್ನು ಎಐಸಿಸಿ ಒಬಿಸಿ ರಾಷ್ಟ್ರೀಯ ಘಟಕಕ್ಕೆ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗ್ತಾರೆ ಅಂತೇನಿಲ್ಲ. ಹಿಂದಿನಿಂದಲೂ ಹಿಂದುಳಿದ ಕ್ಷೇಮಾಭಿವೃದ್ಧಿ ಕೆಲಸ ಮಾಡಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಜವಾಬ್ದಾರಿ ಕೊಟ್ಟಿದ್ದಾರೆ. ಅನೇಕ ವೇಳೆ ಕೆಲವರು ರಾಷ್ಟ್ರ ರಾಜಕಾರಣಕ್ಕೆ ಹೋಗಿದ್ದಾರೆ. ಹಾಗಂತ ಸಿದ್ದರಾಮಯ್ಯ ಹೋಗಬೇಕು ಅಂತೇನಿಲ್ಲ ಎಂದರು.
ಸಿಎಂ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಮಹತ್ವದ ಜವಾಬ್ದಾರಿ ನೀಡಿದೆ. ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ.ನಾಲ್ವರು ಮಾಜಿ ಮುಖ್ಯಮಂತ್ರಿಗಳು, 24 ಸದಸ್ಯರ ಸಲಹಾ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ರಾಷ್ಟ್ರ ಮಟ್ಟದ ಹುದ್ದೆಯನ್ನೂ ನಿಭಾಯಿಸಲಿದ್ದಾರೆ.