ಬೆಂಗಳೂರು : ಗ್ಯಾರಂಟಿ ಯೋಜನೆಗೆ NDRF ಹಣ ಬಳಕೆ ಮಾಡಲಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆಗೆ ಇದೀಗ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದು, NDRF ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದರು.
ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಧ್ಯಮಗಳೊಂದಿಗೆ ಮಾತನಾಡಿದ ಅವರು, NDRF ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿಲ್ಲ. ಬಿಜೆಪಿಯವರಿಗೆ ಒಂದು ರೀತಿ ಕಾಮಾಲೆ ರೋಗ ಇದ್ದಂತೆ. ಗ್ಯಾರಂಟಿ ಯೋಜನೆ ಸಕ್ಸಸ್ ಆಗಿದ್ದಕ್ಕೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಗ್ಯಾರಂಟಿ ಜಾರಿ ಮಾಡಲು ಆಗಲ್ಲ ಎಂದು ಮೋದಿ ಹೇಳಿದ್ದರು. ಕರ್ನಾಟಕದಲ್ಲಿ ಎರಡೂವರೆ ವರ್ಷದಿಂದ ಗ್ಯಾರಂಟಿ ಸಕ್ಸಸ್ ಆಗಿದೆ ಎಂದರು.
ಹಾಗಾಗಿ ಬಿಜೆಪಿಯವರಿಗೆ ತಳಮಳ ಆಗಿ ಬಿಟ್ಟಿದೆ. ನಮ್ಮ ಯೋಜನೆಗಳನ್ನು ಬಿಜೆಪಿಯವರು ಕಾಪಿ ಮಾಡುತ್ತಿದ್ದಾರೆ.ಬಿಹಾರ್, ದೆಹಲಿಕ್ಸ್ ರಾಜಸ್ತಾನ್ ಹಾಗು ಮಹಾರಾಷ್ಟ್ರದಲ್ಲಿ ಏನು ಮಾಡಿದ್ದಾರೆ? ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಇನ್ನು MLC ಸಿಟಿ ರವಿ ಹೈಕಮಾಂಡ್ ಗೆ ಸಿದ್ದರಾಮಯ್ಯ ಸೆಡ್ಡು ಹೊಡೆದಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ, ಬಿಜೆಪಿಯವರಿಗೆ ಯಾಕೆ ನಮ್ಮ ಪಕ್ಷದ ಬಗ್ಗೆ ಕಾಳಜಿ? ನಮ್ಮ ಪಕ್ಷದ ಆಂತರಿಕ ವಿಚಾರದ ಬಗ್ಗೆ ಯಾಕೆ ತಲೆಕೆಡಿಸಿಕೊಳ್ಳಬೇಕು? ನಮ್ಮ ಹೈಕಮಾಂಡ್ ಬಗ್ಗೆ ತಲೆಕೆಡಿಸಿಕೊಳ್ಳಲು ಅವರು ಯಾರು? 4 ವರ್ಷ ಅಧಿಕಾರದಲ್ಲಿದ್ರೂ ಬಿಜೆಪಿಯವರು ಏನು ಮಾಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.