ಬೆಂಗಳೂರು : ಪ್ರಸಕ್ತ 2025ನೇ ಸಾಲಿನ ನೀಟ್-ಯುಜಿ ಪರೀಕ್ಷೆಯು ಮೇ 4ರ ಮಧ್ಯಾಹ್ನ 2ರಿಂದ ಸಂಜೆ 5ರ ವರೆಗೆ ರಾಜ್ಯದ ಒಟ್ಟು 381 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, , ರಾಜ್ಯದಲ್ಲಿ 1.49 ಲಕ್ಷ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
381 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30ರ ಅವಧಿ ಯಲ್ಲಿ ವಿದ್ಯಾರ್ಥಿಗಳ ಹಾಜರಾತಿಗೆ ಅವಕಾಶ ಇರಲಿದೆ. ವಿದ್ಯಾರ್ಥಿಗಳು ಪ್ರವೇಶಾತಿ ಪತ್ರದೊಂದಿಗೆ ಕಾಲೇಜಿನಿಂದ ನೀಡಲ್ಪಟ್ಟಿ ರುವ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡಿಎಲ್, ಮತದಾರರ ಗುರುತಿನ ಚೀಟಿ ಅಥವಾ ಇತರೆ ಯಾವುದಾದರೂ ಅಂಗೀಕೃತ ಗುರುತಿನ ಚೀಟಿ, ಎರಡು ಪಾಸ್ ಪೋರ್ಟ್ ಅಳತೆಯ ಫೋಟೊಗ ಳೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗ ಬೇಕು. ಪೊಲೀಸ್ ಸಿಬ್ಬಂದಿ ವತಿಯಿಂದ ವಿದ್ಯಾರ್ಥಿಗಳ ತಪಾಸಣೆ ನಡೆಯಲಿದೆ.
ಪರೀಕ್ಷಾರ್ಥಿಗಳಿಗೆ ಮಾರ್ಗಸೂಚಿ ಪ್ರಕಟ
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ವಯ ಮಾರ್ಗಸೂಚಿ ಪಾಲಿಸಬೇಕು. ಪೂರ್ಣ ತೋಳಿರುವ ಮೇಲಂಗಿ, ದೊಡ್ಡ ಬಟನ್‌ಗಳಿರುವ ರ ಅಂಗಿ, ಪ್ಯಾಂಟ್, ಶೂ, ಸಾಕ್ಸ್, ಎತ್ತರದ ಚಪ್ಪಲಿ, ಕಿವಿಯೋಲೆ, ಬಳೆ, ಸರ, ಕಾಲೆಜ್ಜೆ, ಮೂಗುತಿ, ಜಡೆ ಕ್ಲಿಪ್ ಹಾಗೂ ಇತರ ಯಾವುದೇ ಲೋಹದ ಉಪಕರಣ ಧರಿಸುವಂತಿಲ್ಲ ಹಾಗೂ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣ ತರುವಂತಿಲ್ಲ ಮತ್ತು ಧರಿಸುವಂತಿಲ್ಲ ಎಂದು ಇಲಾಖೆ ತಿಳಿಸಿದೆ.