ಧಾರವಾಡ : ಕಳೆದ 2024 ಏಪ್ರಿಲ್ 18 ರಂದು ಕೆಎಲ್‌ಇ ವಿಶ್ವವಿದ್ಯಾಲಯ ಆವರಣದಲ್ಲಿ ನೇಹ ಹಿರೇಮಠ್ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಕೊಲೆ ಆರೋಪಿಯಾಗಿದ್ದ ಫಯಾಜ್ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ.
ಹೌದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮೂರನೇ ಬಾರಿಗೆ ಫಯಾಜ್ ಜಾಮೀನು ಅರ್ಜಿ ವಜಾಗೊಳಿಸಿದೆ ಕೆಎಲ್ಇ ವಿಶ್ವ ವಿದ್ಯಾಲಯದ ಆವರಣದಲ್ಲಿಯೇ ಫಯಾಜ್ ನೇಹಾ ಹಿರೇಮಠಗಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ. 2014 ಏಪ್ರಿಲ್ 18 ರಂದು ಈ ಒಂದು ಕೊಲೆ ನಡೆದಿತ್ತು. ದೇಶಾದ್ಯಂತ ನೇಹಾ ಹಿರೇಮಠ ಕೊಲೆ ಪ್ರಕರಣ ಭಾರಿ ಸಂಚಲನ ಮೂಡಿಸಿತು. ಇದೀಗ ಫಯಾಜ್ ಗ್ರಾಮೀಣ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾ ಗೊಳಿಸಿದೆ








