ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯರಾದ ನಿರಂಜನ್ ಹಿರೇಮಠ್ ಅವರ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್ ವಿಚಾರಣೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗಪಡಿಸಿದ್ದಾನೆ.

ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್ ನೇಹಾ ಹತ್ಯೆಗೆ ಐದು ದಿನಗಳ ಮೊದಲೇ ಪ್ಲ್ಯಾನ್ ಮಾಡಿದ್ದ. ಧಾರವಾಡದಲ್ಲಿ ಚಾಕು ಖರೀದಿಸಿ ಬ್ಯಾಕ್ ನಲ್ಲಿ ಇಟ್ಟುಕೊಂಡಿದ್ದ. ಪ್ರತಿದಿನ ನೇಹಾಳ ಚಲನಲವಲನ ಗಮನಿಸುತ್ತಿದ್ದ. ನೇಹಾ ನನಗೆ ಬಿಟ್ಟು ಯಾರಿಗೂ ಸಿಗಬಾರದು ಎಂದು ಹತ್ಯೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ.

ಧಾರವಾಡ ಜೆಎಂಎಫ್ ಸಿ ಕೋರ್ಟ್ ಆರೋಪಿ ಫಯಾಜ್ ನನ್ನು ಆರು ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಈಗಾಗಲೇ ರಾಜ್ಯ ಸರ್ಕಾರವು ನೇಹಾ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ ಕೋರ್ಟ್ ಫಯಾಜ್ ನನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶ ನೀಡಿದೆ.

ಸದ್ಯ ಧಾರವಾಡದ ಕೇಂದ್ರ ಕಾರಗೃಹದಲ್ಲಿರುವ ಫಯಾಜ್ ನನ್ನು ಇಂದು ಸಿಐಡಿ ಕಸ್ಟಡಿಗೆ ಪಡೆದುಕೊಂಡು ವಿಚಾರಣೆ ನಡೆಸಲಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯರಾದ ನಿರಂಜನ್ ಹಿರೇಮಠ್ ಅವರ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಷ್ಟ್ರದಾದ್ಯಂತ ಭಾರಿ ಸಂಚಲನ ಸೃಷ್ಟಿಸಿದೆ.

Share.
Exit mobile version