ಬೆಂಗಳೂರು : ರಾಜ್ಯ ಪೊಲೀಸ್ ಹಾಗೂ ಮುಖ್ಯಪೇದೆಗಳ ಟೋಪಿ ಬದಲಾಗಲಿದೆ. ತೆಲಂಗಾಣ ಪೊಲೀಸರ ಮಾದರಿ ಯಲ್ಲಿ ರಾಜ್ಯದ ಪೊಲೀಸ್ ಪೇದೆಗಳಿಗೆ ತೆಳು ಟೋಪಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆ ಮಾಡಿದ್ದು, ವಿತರಣೆಗೆ ಅನುಮತಿ ನೀಡಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್ ಸ್ಟೇಬಲ್ ಹಾಗೂ ಹೆಡ್ ಕಾನ್ಸ್ಟೇಬಲ್ಗಳಿಗೆ ‘ಸ್ಟೋಚ್ ಕ್ಯಾಪ್’ಗೆ ಪರ್ಯಾಯವಾಗಿ ತೆಲಂಗಾಣ ಪೊಲೀಸರಮಾದರಿಯತೆಳುವಾದ ಟೋಪಿಯನ್ನು ಆಯ್ಕೆ ಮಾಡಲಾಗಿದೆ.
ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಕೇರಳ, ತಮಿಳು ನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ತೆಲಂಗಾಣ ಪೊಲೀಸರು ಬಳಸುವ ಟೋಪಿ ಗಳನ್ನು ಪ್ರದರ್ಶನಕ್ಕಿಡಲಾಗಿತ್ತು. ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಟೋಪಿಗಳನ್ನು ವೀಕ್ಷಿಸಿ, ಕೊನೆಗೆ ಸಿಎಂ ಸಿದ್ದರಾಮಯ್ಯ ಅವರು ತೆಳು ಹಾಗೂ ಹಗುರವಾಗಿರುವ ತೆಲಂಗಾಣ ಪೊಲೀಸರ ಮಾದರಿಯ ಟೋಪಿಗೆ ಅನುಮತಿ ನೀಡಿದ್ದಾರೆ.
ಇತ್ತೀಚೆಗೆ ರಾಜ್ಯದಲ್ಲಿ ಹೆಡ್ ಕಾನ್ಸ್ಟೇಬಲ್ ಹಾಗೂ ಕಾನ್ಸ್ಟೇಬಲ್ಗಳು ಧರಿಸುವ ಧರಿಸುವ ಕ್ಲೋಚ್ ಹ್ಯಾಟ್ (ಟೋಪಿ) ಬದಲಾವಣೆ ಮಾಡದಂತೆ ಸರ್ಕಾರಕ್ಕೆ ಪೊಲೀಸ್ ಇಲಾಖೆಯ ಉನ್ನತ ಮಟ್ಟದ ಸಮಿತಿ ಶಿಫಾರಸು ಮಾಡಿತ್ತು.