ಬೆಂಗಳೂರು : ಡಿಸೆಂಬರ್ 31 ರ ಇಂದು ಹೊಸ ವರ್ಷಾಚರಣೆ ಹಿನ್ನೆಲೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರವು ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ
ನಂದಿಬೆಟ್ಟ
ಡಿಸೆಂಬರ್ 31 ರ ಸಂಜೆ 6 ಗಂಟೆಯಿಂದ ಜನವರಿ 1 ರ ಬೆಳಗ್ಗೆ 7 ಗಂಟೆಯವರೆಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಂಪೂರ್ಣ ನಿಷೇಧ ಹೇರಿ ಆದೇಶ ಹೊರಡಿಸಿದೆ. ಡಿಸೆಂಬರ್ 31ಸಂಜೆ 6 ಗಂಟೆಯಿಂದ 2025 ಜನವರಿ1ರಂದು ಬೆಳಿಗ್ಗೆ 7 ಗಂಟೆವರೆಗೂ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದ್ದು, ಜೊತೆಗೆ ಅತಿಥಿ ಗೃಹಗಳಿಗೆ ಪ್ರವೇಶ ಕೂಡ ನಿರ್ಬಂಧಿಸಿದೆ.
ಚಾಮುಂಡಿ ಬೆಟ್ಟ
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಸಂಜೆ 7 ಗಂಟೆ ನಂತರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಕಾವೇರಿ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧ
ಕೆಆರ್ ಎಸ್ ಹಿನ್ನೀರು. ಬಲಮುರಿ, ಎಡಮುರಿ, ಕಾವೇರಿ ನದಿ ತೀರಕ್ಕೆ ಜ.1 ರಾತ್ರಿವರೆಗೂ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಲಾಗಿದೆ. ಮಳವಳ್ಳಿ ತಾಲೂಕಿನ ಮುತ್ತತ್ತಿ ಕಾವೇರಿ ತೀರದಲ್ಲೂ ನಿರ್ಬಂಧ
ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿಗೆ ಪ್ರವಾಸಿಗರಿಗೆ ನಿರ್ಬಂಧ
ಚಿಕ್ಕಮಗಳೂರಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಸೇರಿ ಹಲವು ತಾಣಗಳಲ್ಲಿ ಪ್ರವಾಸಿಗರಿಗೆ ಇಂದು ಸಂಜೆ 6 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆ ನಿರ್ಬಂಧ ವಿಧಿಸಲಾಗಿದೆ.