ಬೆಂಗಳೂರು : ಬೆಂಗಳೂರಿನಲ್ಲಿ ಓದುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿ ಇದೀಗ ನಿಫಾ ವೈರಸ್ ಗೆ ಬಲಿಗಾಗಿದ್ದು, ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ 41 ಜನರ ರಕ್ತ ಪರೀಕ್ಷೆ ಮಾಡಲಾಗಿದ್ದು, ಈ ಪೈಕಿ ಓರ್ವನಿಗೆ ನಿಫಾ ಸೋಂಕು ಇರುವುದು ದೃಢಪಟ್ಟಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕೈಗೊಂಡಿದೆ.
ಕೇರಳದ ಮಲಪುರಂ ಮೂಲದ 24 ವರ್ಷದ ವಿದ್ಯಾರ್ಥಿ ನಿಫಾ ವೈರಸ್ ಗೆ ಸಾವನ್ನಪ್ಪಿದ್ದು, ಬಳಿಕ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಬೆಂಗಳೂರಿನ 41 ವಿದ್ಯಾರ್ಥಿಗಳಿಗೆ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ ಓರ್ವನಿಗೆ ಸೋಂಕು ದೃಢಪಟ್ಟಿದೆ.
ರಾಜ್ಯದಲ್ಲಿ ನಿಫಾ ವೈರಸ್ ಜೊತೆಗೆ ಮಂಕಿಫಾಕ್ಸ್ ಆತಂಕ ಶುರುವಾಗಿದ್ದು, ಸೋಂಕು ದೃಢಪಟ್ಟರೆ ಸೋಂಕಿತರು ಹೋಮ್ ಐಸೋಲೇಷನ್ ಆಗುವುದು ಕಡ್ಡಾಯವಾಗಿದೆ. ಒಂದು ವೇಳೆ ನಿಫಾ ವೈರಸ್ ನಿಂದ ಸಾವನ್ನಪ್ಪಿದವರ ಸಂಪರ್ಕಿತರನ್ನು ಕ್ವಾರಂಟೈನ್ ಮಾಡಲಾಗುವುದು ಆರೋಗ್ಯ ಇಲಾಖೆ ತಿಳಿಸಿದೆ.