ಸರ್ವೋಚ್ಚ ನ್ಯಾಯಾಲಯ 3 ಪ್ರಕರಣಗಳಲ್ಲಿ ಸ್ಪಷ್ಟವಾಗಿ ಗೋಮಾಳ ಜಮೀನನ್ನು ಇತರೆ ಉದ್ದೇಶಗಳಿಗೆ ಮಂಜೂರು ಮಾಡದಂತೆ ಆದೇಶ ಹೊರಡಿಸಲಾಗಿದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ಭೂ ಸುಧಾರಣೆ ಕಾಯ್ದೆ – 1991ರ ಅನುಸಾರ 100 ಜಾನುವಾರುಗಳಿಗೆ 30 ಎಕರೆ ಗೋಮಾಳ ಜಮೀನು ಕಾಯ್ದಿರಿಸುವ ನಿಯಮ ರೂಪಿಸಲಾಗಿದೆ. ಸದ್ಯ ಇವುಗಳ ಬದಲಾವಣೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.