ಬೆಂಗಳೂರು : ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ ಸಂಪುಟ ಪುನಾರಚನೆಯ ಕುರಿತು ಪ್ರಸ್ತಾಪಿಸಿದರು. ಈ ವೇಳೆ ರಾಹುಲ್ ಗಾಂಧಿ, ರಾಜ್ಯ ಸಚಿವ ಸಂಪುಟ ಪುನಾರಚನೆಗೆ ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ವಿಚಾರವಾಗಿ ಗೃಹ ಸಚಿವಾಜಿ ಪರಮೇಶ್ವರ ಪುನಾರಚನೆಗೆ ಅನುಮತಿ ಕೊಟ್ಟರೆ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯ ಸಚಿವ ಸಂಪುಟ ಪುನರಚನೆ ಆದರೆ ನಾಯಕತ್ವ ಬದಲಾವಣೆ ಆಗಲ್ಲ ಪುನಾರಚನೆಗೆ ರಾಹುಲ್ ಗಾಂಧಿಯವರು ಅನುಮತಿ ಕೊಟ್ಟಿದ್ದಾರೆ ಅಂತ ಹೇಳುತ್ತಿದ್ದಾರೆ. ಆದರೆ ಸಂಪುಟ ಪುನಾರಚನೆ ಆದರೆ ನಾಯಕತ್ವ ಬದಲಾವಣೆ ಆಗಲ್ಲ. ನಾಯಕತ್ವದ ಬದಲಾವಣೆ ಇಲ್ಲ ಅಂತ ಆಯ್ತು ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದರು.
ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ ಮೇಲೆ ಸರಿಯಾಯ್ತು ಅಲ್ವಾ. ಸಂಪುಟ ಪುನ ರಚನೆ ಬಹಳ ದಿನದ ಬೇಡಿಕೆ ಇತ್ತು ಬಹಳ ಮಂತ್ರಿಗಳು ಪುನಾರಚನೆ ಆಗಬೇಕು ಎಂದು ಅಪೇಕ್ಷೆ ಪಡುತ್ತಿದ್ದರು. ಈಗ ಸಚಿವ ಸಂಪುಟ ಪುನಾರಚನೆಗೆ ಅನುಮತಿ ಸಿಕ್ಕಿದೆ ಅಂದರೆ ಸಿಎಂ ಸಿದ್ದರಾಮಯ್ಯ ಮತ್ತು ಹೈಕಮಾಂಡ್ ನವರು ಮಾಡುತ್ತಾರೆ. ಅದರಲ್ಲಿ ದೊಡ್ಡ ವಿಚಾರ ಏನೂ ಇಲ್ಲ ಎಂದು ಪರಮೇಶ್ವರ್ ತಿಳಿಸಿದರು.
ಹಲವರು ಮಂತ್ರಿಗಳು ಆಗಬೇಕು ಅಂತ ಆಸೆ ಪಡುತ್ತಿದ್ದಾರೆ. ಪುನಾರಚನೆಯ ಕುರಿತು ಸಿಎಂ ಮತ್ತು ಹೈಕಮಾಂಡ್ ಮಾಡುತ್ತಾರೆ. ಇನ್ನು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ವಿಚಾರವಾಗಿ ಇದೆಲ್ಲವನ್ನು ಹೈಕಮಾಂಡ್ ನಾಯಕರು ನಿರ್ಧಾರ ಮಾಡುತ್ತಾರೆ. ಸಮಯ ಸಂದರ್ಭ ನೋಡಿಕೊಂಡು ತೀರ್ಮಾನ ಮಾಡುತ್ತಾರೆ ಎಂದು ಬೆಂಗಳೂರಿನಲ್ಲಿ ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು.








