ಬೆಳಗಾವಿ : ಇತ್ತೀಚಿಗೆ ಎಂಎಲ್ಸಿ ಯತೀಂದ್ರ ಸಿದ್ಧರಾಮಯ್ಯ ರಾಜ್ಯದಲ್ಲಿ ಯಾವುದೇ ನಾಯಕತ್ವ ಬದಲಾವಣೆ ಇಲ್ಲ ಈ ವಿಚಾರವಾಗಿ ಹೈಕಮಾಂಡ್ ಸ್ಪಷ್ಟನೆ ನೀಡಿದೆ ಎಂದು ಹೇಳಿಕೆ ನೀಡಿದರು. ಇವರ ಒಂದು ಹೇಳಿಕೆಗೆ ಸ್ವಪಕ್ಷದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ಎಚ್ಎಸ್ ಬಾಲಕೃಷ್ಣ ಅವರು ಯತೀಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇದೀಗ ಬೆಳಗಾವಿಯಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರು ಮತ್ತೆ ತಮ್ಮ ಹೇಳಿಕೆಯನ್ನು ಪುನರುಚ್ಚಿಸಿದ್ದಾರೆ. ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬೆಳಗಾವಿಯಲ್ಲಿ ಯತಿಂದ್ರ ಸಿದ್ಧರಾಮಯ್ಯ ಮತ್ತೆ ಪುನರುಚ್ಚಿಸಿದ್ದಾರೆ. ಹೈಕಮಾಂಡ್ ಕೂಡ ಈ ವಿಚಾರವಾಗಿ ಸ್ಪಷ್ಟವಾಗಿ ಹೇಳಿದೆ ನಾಯಕತ್ವ ವಿಚಾರದಲ್ಲಿ ಯಾವುದೇ ಜಗಳ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಮತ್ತೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.








