ಬೆಂಗಳೂರು: ತುಮಕೂರಿನಲ್ಲಿ ಸಂಭವಿಸಿದ ಬಾಣಂತಿ ಮತ್ತು ನವಜಾತ ಶಿಶುಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ವೈದ್ಯರು ಮತ್ತು ಶುಕ್ರೂಷಕರ ಕರ್ತವ್ಯ ಲೋಪ, ನಿರ್ಲಕ್ಷತೆಯು ಗಂಭೀರ ಸ್ವರೂಪದ್ದಾಗಿರುವುದರಿಂದ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ರವರು ಸಂಬಂಧಪಟ್ಟ ಸ್ತ್ರೀ ರೋಗ ಮತ್ತು ಪ್ರಸೂತಿ ತಜ್ಞರು ಹಾಗೂ ಕರ್ತವ್ಯ ನಿರತ 3 ಶುಶೂಷಾಧಿಕಾರಿಗಳನ್ನು ತನಿಖೆ ಹಾಗೂ ಶಿಸ್ತುಕ್ರಮ ಬಾಕಿ ಇರಿಸಿ ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿರುತ್ತಾರೆ. ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಆಸ್ಪತ್ರೆ, ತುಮಕೂರು ಇವರಿಗೆರವರಿಗೆ 24 ಗಂಟೆಯೊಳಗಾಗಿ ಈ ಪುಕರಣಕ್ಕೆ ಸಂಬಂಧಿಸಿದಂತೆ ಉತ್ತರಿಸುವಂತೆ ಕಾರಣ ಕೇಳಿ ನೋಟಿಸನ್ನು ಜಾರಿ ಮಾಡಿದ್ದಾರೆ.
ಇದೇ ವೇಳೆ ಆದೇಶದಲ್ಲಿಸಾರ್ವಜನಿಕರಿಗೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳಿಗೆ ಈ ಕೆಳಕಂಡ ಅಂಶಗಳನ್ನು ಈ ಮೂಲಕ ತಿಳಿಯಪಡಿಸಲಾಗಿದೆ.
> ಕರ್ನಾಟಕ ರಾಜ್ಯವು ಸಾರ್ವಜನಿಕ ಆರೋಗ್ಯ ಪದ್ಧತಿಯಲ್ಲಿ ಇದುವರವಿಗೂ ರೋಗಿಗಳಿಗೆ ತಾಯಿ ಕಾರ್ಡ, ಆಧಾರ ಕಾರ್ಡ, ಪಡಿತರ ಚೀಟಿ ಇಲ್ಲದೆಯೂ ಆರೋಗ್ಯ ಸೇವೆಗಳನ್ನು ನೀಡುತ್ತಾ ಬಂದಿದೆ. ತುರ್ತು ಆರೋಗ್ಯ ಸೇವೆಯನ್ನು ನೀಡುವ ಸಂದರ್ಭದಲ್ಲಿ ಯಾವುದೇ ದಾಖಲೆಗಳು ಅವಶ್ಯವಿರುವುದಿಲ್ಲ.
> ರೋಗಿಯು ಯಾವುದೇ ದಾಖಲೆಯು ಅಂದರೆ ತಾಯಿ ಕಾರ್ಡ, ಆಧಾರ ಕಾರ್ಡ, ಪಡಿತರ ಚೀಟಿ ಇತರೆ ದಾಖಲೆಗಳು ಇಲ್ಲದೇ ಇದ್ದರೂ ಸಹ ತುರ್ತು ಪರಿಸ್ಥಿತಿಯಲ್ಲಿ ಆರೋಗ್ಯ ಸೇವೆಯನ್ನು ನೀಡುವುದು ಆಸ್ಪತ್ರೆಗಳ/ಆರೋಗ್ಯ ಕೇಂದ್ರಗಳ ಆದ್ಯ ಕರ್ತವ್ಯವಾಗಿರುತ್ತದೆ.
> ದಿ. 02-11-2022, ತುಮಕೂರಿನಲ್ಲಿ ನಡೆದ ಘಟನೆಯ ಆಧಾರದ ಮೇಲೆ ಈ ಕೆಳಕಂಡ ಅಂಶವನ್ನು ಆರೋಗ್ಯ ಇಲಾಖೆಯು ಮತ್ತೊಮ್ಮೆ ಪುನರುಚ್ಚರಿಸಿದ. ೦ ಆರೋಗ್ಯ ಸೇವೆಯನ್ನು ನೀಡುವಾಗ ರೋಗಿಯ ರಾಷ್ಟ್ರೀಯತೆ/ಜಾತಿ/ ವರ್ಗ/ ಆರ್ಥಿಕ ಸ್ಥಿತಿ ಯನ್ನು ಅವಲಂಭಿಸಬಾರದು. ತುರ್ತು ಪರಿಸ್ಥಿತಿಯಲ್ಲಿ ರೋಗಿಯ ನೋವು ಸಂಕಟವನ್ನು ನಿವಾರಿಸುವುದು ವೈಧ್ಯರ, ಶುಶೂಷಕರ ಮತ್ತು ಇತರೆ ಸಿಬ್ಬಂದಿ ವರ್ಗದವರ ಆದ್ಯ ಕರ್ತವ್ಯವಾಗಿರುತ್ತದೆ. ಆದುದರಿಂದ, ಸಾರ್ವಜನಿಕ ಆರೋಗ್ಯ ಸಂಸ್ಥೆಗಳು ತುರ್ತು ಪರಿಸ್ಥಿತಿಯಲ್ಲಿ ರೋಗಿಯು ಯಾವುದೇ ರೀತಿಯ ದಾಖಲೆಗಳನ್ನು ಒತ್ತಾಯಿಸಬಾರದೆಂದು ಈ ಮೂಲಕ ಮತ್ತೊಮ್ಮೆ ತಿಳಿಯಪಡಿಸಲಾಗಿದೆ. ಒದಗಿಸಲು ಇಂತಹ ಘಟನೆಯು ಮುಂದಿನ ದಿನಗಳಲ್ಲಿ ಮರುಕಳಿಸಿದ್ದಲ್ಲಿ ಇಲಾಖೆಯು ಸಂಬಂದಪಟ್ಟ ಅಧಿಕಾರಿ/ನೌಕರರನ್ನು ಸೇವೆಯಿಂದ ವಜಾಗೊಳಿಸುವುದಲ್ಲದೆ ಕ್ರಿಮಿನಲ್ ಮೊಕದ್ದಮೆಯನ್ನು ಹೂಡಲಾಗುವುದು ಅಂತ ತಿಳಿಸಿದೆ.