ಬೆಂಗಳೂರು : ತಿಪ್ಪರಲಾಗ ಹಾಕಿದ್ರು ಗ್ಯಾರಂಟಿಗಳನ್ನು ತೆಗೆದು ಹಾಕಲು ಸಾಧ್ಯವಿಲ್ಲ. ಯಾವುದೇ ಸರ್ಕಾರ ಬಂದರು ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲು ಆಗಲ್ಲ ಎಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ಬೆಲೆ ಏರಿಕೆ ಹಾಗು ಆದಾಯ ಪಾತಾಳಕ್ಕೆ ಹೋಗ್ತಿತ್ತು. ಹೀಗಾಗಿ ಮಾದರಿ ಕಾರ್ಯಕ್ರಮ ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಹಳ್ಳಿ ಹಳ್ಳಿಗಳಲ್ಲಿ ಗ್ಯಾರಂಟಿ ಸಂಭ್ರಮ ಆಚರಿಸಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದರು.








