ಮೈಸೂರು : ರಾಜ್ಯದಲ್ಲಿ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ. ಕಾಂಗ್ರೆಸ್ ಸರ್ಕಾರ ಜಾರಿಗೆ ಮಾಡಿರುವ ಎಲ್ಲಾ ಐದು ಗ್ಯಾರಂಟಿಗಳನ್ನು ಮುಂದುವರಿಸಲಾಗುತ್ತದೆ ಎಂದು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಸುಳ್ಳು ಹೇಳುವುದನ್ನು ಬಿಡಬೇಕು. ನಾವು ಪಾಪರ್ ಆಗಿದ್ದರೆ ಅಭಿವೃದ್ಧಿ ಯೋಜನೆಗೆ ಶಿಲಾನ್ಯಾಸ ಮಾಡುತ್ತಿರಲಿಲ್ಲ. ಒಂದೇ ಕ್ಷೇತ್ರದಲ್ಲಿ 480 ಕೋಟಿ ಅಭಿವೃದ್ಧಿ ಯೋಜನೆ ಮಾಡಲಾಗುತ್ತಿತ್ತಾ? ಎಂದು ಪ್ರಶ್ನಿಸಿದರು.
ಇದನ್ನು ಜನ ಅರ್ಥಮಾಡಿಕೊಳ್ಳಬೇಕು. ನಾವು ನುಡಿದಂತೆ ನಡೆದವರು. ನಾವು ಅಭಿವೃದ್ಧಿಗೂ ಹಣ ಕೊಡುತ್ತೇವೆ ಅಲ್ಲದೇ ನಾವು ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳಿಗೂ ಕೂಡ ಹಣ ಕೊಡುತ್ತೇವೆ. ರಾಜ್ಯದಲ್ಲಿ ಯಾವುದೇ ಗ್ಯಾರೆಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಾ ಗ್ಯಾರಂಟಿ ಯೋಜನೆಗಳು ಮುಂದುವರಿಯಲಿವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.