ಬೆಂಗಳೂರು : ಅಡುಗೆ ಎಣ್ಣೆ, ಇಂಧನ, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೆ, ನಂದಿನಿ ಹಾಲಿನ ದರ ಕೂಡ ಶೀಘ್ರವೇ ಏರಿಕೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ ಇದೀಗ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಅವರು ಸದ್ಯಕ್ಕೆ ನಂದಿನಿ ಹಾಲಿನ ದರದಲ್ಲಿ ಯಾವುದೇ ಏರಿಕೆ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ರಾಮನಗರದಲ್ಲಿ ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಎಲ್ಲಾ ಅಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಅಂತ ಹೇಳಿದ್ದಾರೆ. ಸದ್ಯಕ್ಕೆ ಹಾಲಿನ ದರ ಏರಿಕೆ ಬಗ್ಗೆ ಮಾಹಿತಿ ಇಲ್ಲ. ಆದರೆ ನಂದಿನಿ ಹಾಲಿನ ದರ ಏರಿಕೆಗೆ ರಾಜ್ಯದ ರೈತರ ಬೇಡಿಕೆ ಇದೆ ಕೆಎಂಎಫ್ ಎಂಡಿ ವರ್ಗಾವಣೆ ಆಡಳಿತಾತ್ಮಕ ತೀರ್ಮಾನ ಅಷ್ಟೇ ಎಂದು ವಿಧಾನಸೌಧದಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದರು.