ಬೆಂಗಳೂರು : ರನ್ನಾ ರಾವ್ ಪ್ರಕರಣದಲ್ಲಿ ಯಾವ ಸಚಿವರೂ ಭಾಗಿಯಾಗಿಲ್ಲ. ಅವರಿಗೂ ಪ್ರಕಾರಣಕ್ಕೂ ಯಾವುದೇ ಸಂಬಂಧವಿಲ್ಲ. ಕಾನೂನು ಪ್ರಕಾರ ತನಿಖಾಧಿಕಾರಿಗಳು ಕೆಲಸ ಮಾಡುತ್ತಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ಖಾಸಗಿ ಹೊಟೇಲ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ನಟಿ ರನ್ಯಾ ರಾವ್ ಅವರು ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಪ್ರಕರಣದಲ್ಲಿ ಸಚಿವರುಗಳ ಹೆಸರು ಕೇಳಿ ಬಂದಿರುವ ಬಗ್ಗೆ ಪ್ರಶ್ನಿಸಿದಾಗ, “ಸಚಿವರಿಗೂ ಇದಕ್ಕೂ ಸಂಬಂಧವಿಲ್ಲ. ಕೇಂದ್ರ ಸರ್ಕಾರದವರು ತನಿಖೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಮಾಡಲಿ ಎಂದರು.