ರಾಯಚೂರು : ನಿನ್ನೆ ರಾಜ್ಯಕ್ಕೆ ಭೇಟಿ ನೀಡಿದಂತಹ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಶೀಘ್ರದಲ್ಲಿ ನೂತನ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತು ಚುನಾವಣೆ ನಡೆಯಲಿದೆ ಎಂದು ಹೇಳಿಕೆ ನೀಡಿದರೆ, ಇನ್ನೊಂದು ಕಡೆಗೆ ಶಾಸಕ ಬಚನಗೌಡ ಪಾಟೀಲ ಯತ್ನಾಳ್ ಬಣ ಬಿ ವೈ ವಿಜಯೇಂದ್ರ ವಿರುದ್ಧ ಆಕ್ರೋಶ ಹೊರ ಹಾಕುತ್ತಿದೆ. ಇದರ ಮಧ್ಯ ಬಿಜೆಪಿ ಮಾಜಿ ಸಚಿವ ಶಿವನಗೌಡ ನಾಯಕ್ ಬಿ ವೈ ವಿಜಯೇಂದ್ರ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಸಿಎಂ ಆಗುವುದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ. ಬಿವೈ ವಿಜಯೇಂದ್ರ ನೂರಕ್ಕೆ ನೂರು ಮುಖ್ಯಮಂತ್ರಿಯಾಗಿ ಆಗುತ್ತಾರೆ. ನೀವು ಅಧಿಕಾರಕ್ಕೆ ಬಂದು ನಮಗೆ ನವಲಿ ಜಲಾಶಯ ಮಾಡಿಕೊಡಿ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಆಸ್ಪತ್ರೆಗಾಗಿ ಹೋರಾಟ ನಡೆಯುತ್ತಿದೆ ಎಂದು ತಿಳಿಸಿದರು.
ಪ್ರಧಾನಿ ಮೋದಿ, ಅಮಿತ್ ಷಾ, ಜೆಪಿ ನಡ್ಡಾ ಮನವೊಲಿಸಿ ತರಬಹುದು. ರಾಯಚೂರಿಗೆ ಏಮ್ಸ್ ತರಲು ಬಿವೈ ವಿಜಯೇಂದ್ರ ಅವರಿಂದ ಸಾಧ್ಯವಿದೆ. ಈಗ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಾರೆ ಮುಂದೆ ವಿಜಯೇಂದ್ರ ಮುಖ್ಯಮಂತ್ರಿ ಆಗಬೇಕು ವಿಜಯೇಂದ್ರ ಅಧಿಕಾರದ ಕತ್ತಿ ಹಿಡಿದು ಸರ್ಕಾರವನ್ನು ತರಬೇಕಿದೆ ಎಂದು ಮಾನ್ವಿ ಪಟ್ಟಣದಲ್ಲಿ ಮಾಜಿ ಸಚಿವ ಶಿವನಗೌಡ ನಾಯಕ್ ಹೇಳಿಕೆ ನೀಡಿದರು.