ಬೆಂಗಳೂರು : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪರಿಷ್ಕರಣೆ ವಿಚಾರವಾಗಿ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದು, ಬಿಪಿಎಲ್ ಕಾರ್ಡ್ ರದ್ಧತಿಯ ಬಗ್ಗೆ ಯಾರು ಆತಂಕ ಪಡುವ ಅಗತ್ಯ ಇಲ್ಲ ಎಂದು ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದರು.
ಬಿಪಿಎಲ್ ಕಾರ್ಡ್ ರದ್ದತಿಯ ಬಗ್ಗೆ ಯಾರು ಆತಂಕ ಪಡುವುದು ಬೇಡ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಬಿಪಿಎಲ್ ಕಾರ್ಡ್ಗಳನ್ನು ಪರಿಶೀಲನೆ ಮಾಡಲಾಗುತ್ತದೆ.ಯಾರೆಲ್ಲ ಬಡವರಿದ್ದಾರೋ ಅವರಿಗೆ ಬಿಪಿಎಲ್ ಕಾರ್ಡ್ ಸಿಗುತ್ತದೆ. ಪರಿಶೀಲನೆಯ ವೇಳೆ ಸ್ವಲ್ಪ ಹೆಚ್ಚು ಕಡಿಮೆ ಆಗಬಹುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಸಚಿವ ಸಂಪುಟ ಪುನಾರಚನೆ ಕುರಿತಂತೆ ಮುಖ್ಯಮಂತ್ರಿ ಅವರನ್ನೇ ಕೇಳಿ. ಸಿಎಂ ಸಿದ್ದರಾಮಯ್ಯ ದೆಹಲಿ ಗೆ ಭೇಟಿ ನೀಡುವ ವಿಚಾರವಾಗಿ, ನಂದಿನಿ ಹಾಲು ಮಾರ್ಕೆಟ್ ಮಾಡೋಕೆ ಹೋಗುತ್ತಿದ್ದಾರೆ. ಮುರುಡೇಶ್ವರದಲ್ಲಿ ಮೀನುಗಾರಿಕೆ ಇಲಾಖೆಯ ಕಾರ್ಯಕ್ರಮವಿದೆ. ಹೀಗಾಗಿ ನಾನು ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರಕ್ಕೆ ಹೋಗುತ್ತಿದ್ದೇನೆ ಎಂದರು.
ಸಿಎಂ ಸಿದ್ದರಾಮಯ್ಯ ದೆಹಲಿಗೆ ಭೇಟಿ ಮೊದಲೇ ನಿಗದಿಯಾಗಿತ್ತು. ನಂದಿನಿ ಹಾಲು ಜಾಸ್ತಿ ಮಾರ್ಕೆಟ್ ಆದರೆ ರೈತರಿಗೆ ಅನುಕೂಲವಾಗಲಿದೆ ಹಾಗಾಗಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗುತ್ತಿದ್ದಾರೆ. ಸಿಎಂ ದೆಹಲಿ ಪ್ರವಾಸದ ಹಿಂದೆ ಯಾವುದೇ ರಾಜಕೀಯ ಇಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.