ಬೆಂಗಳೂರು : ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಭರದಿಂದ ಸಾಗುತ್ತಿದ್ದು, ಇವಂದು ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಡವರ ಬಿಪಿಎಲ್ ಕಾರ್ಡ್ಗಳಿಗೆ ಯಾವುದೇ ತೊಂದರೆ ಇಲ್ಲ ಎಲ್ಲಾ ಬಡವರಿಗೂ ಬಿಪಿಎಲ್ ಕಾರ್ಡ್ಗಳನ್ನು ನೀಡುತ್ತೇವೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಡವರ ಬಿಪಿಎಲ್ ಕಾರ್ಡ್ ಗಳಿಗೆ ಯಾವುದೇ ರೀತಿಯಾದ ತೊಂದರೆ ಇಲ್ಲ. ಬಡವರಿಗೆ ಯಾರಿಗೂ ತೊಂದರೆ ಆಗಲು ಬಿಡುವುದಿಲ್ಲ. ಎಲ್ಲಾ ಬಡವರಿಗೂ ಕೂಡ ಕಾರ್ಡ್ ಗಳನ್ನು ಕೊಡುತ್ತೇವೆ. ನಾವು ಯಾವುದೇ ಕಾರ್ಡುಗಳನ್ನು ರದ್ದು ಮಾಡಿಲ್ಲ ಎಂದು ಇದೇ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದರು.
ಈಗಾಗಲೇ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು, ಬಾಗಲಕೋಟೆಯಲ್ಲಿ ರವಿವಾರ ರಜೆಯ ದಿನದಂದು ಕೂಡ ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜನರಿಗೆ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ನಡೆಸುತ್ತಿದ್ದಾರೆ. ಇದುವರೆಗೂ ಬಾಗಲಕೋಟೆ ಜಿಲ್ಲೆಯಲ್ಲಿ 5 ಸಾವಿರಕ್ಕೂ ಅಧಿಕ ಕಾರ್ಡುಗಳನ್ನು ಪರಿಶೀಲನೆ ಮಾಡಿ ಹಿಂದಿರುಗಿಸಿದ್ದಾರೆ ಎಂದು ತಿಳಿದು ಬಂದಿದೆ.