ಬೆಂಗಳೂರು : ಇಇಡಿಎಸ್ (EEDS) ತಂತ್ರಾಂಶದಲ್ಲಿ ಶಿಕ್ಷಕರ ಹಾಗೂ ನೌಕರರ ಸೇವಾ ವಿವರಗಳನ್ನು ತಿದ್ದುಪಡಿ ಕೋರಿ ಸಲ್ಲಿಸಿರುವ ಪ್ರಸ್ತಾವನೆಗಳ ಕುರಿತು ರಾಜ್ಯ ಸರ್ಕಾರ ಮಹತ್ವದ ಮಾಹಿತಿ ನೀಡಿದೆ.
ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ಇಇಡಿಎಸ್ ತಂತ್ರಾಂಶದಲ್ಲಿ ಕೆಜಿಐಡಿ ಸಂಖ್ಯೆ ತಿದ್ದುಪಡಿ, ಹೆಸರು ತಿದ್ದುಪಡಿ, ಜನ್ಮ ದಿನಾಂಕ ತಿದ್ದುಪಡಿಗೆ ಸಂಬಂಧಿಸಿದಂತೆ ಉಲ್ಲೇಖದನ್ವಯ ಪ್ರಸ್ತಾವನೆಗಳು ಸ್ವೀಕೃತಗೊಂಡಿದ್ದು, ಪ್ರಸ್ತುತ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಚಾಲ್ತಿಯಲ್ಲಿರುವುದರಿಂದ ಈ ಹಂತದಲ್ಲಿ ಯಾವುದೇ ತಿದ್ದುಪಡಿಗಳಿಗೆ ಅವಕಾಶವಿರುವುದಿಲ್ಲವೆಂದು ತಿಳಿಸಿದೆ.