ಶಿವಮೊಗ್ಗ: ರಾಜ್ಯ ಸರ್ಕಾರ ಮತ್ತೊಮ್ಮೆ ನಡೆಸಲು ಮುಂದಾಗಿರುವ ಶೈಕ್ಷಣಿಕ, ಆರ್ಥಿಕ ಮರು ಸಮೀಕ್ಷೆ( ಜತಿಗಣತಿ)ಗೆ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮರು ಜಾತಿಗಣತಿಗೆ ಶಿಕ್ಷರನ್ನು ಬಳಸಿಕೊಳ್ಳಲ್ಲ.ಆದರೆ ಗಣತಿ ಜವಾಬ್ದಾರಿ ಹೊರಗುತ್ತಿಗೆ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಸಮೀಕ್ಷೆ ಕಾರ್ಯಕ್ಕೆ ಶಿಕ್ಷಕರನ್ನು ನೇಮಕ ಮಾಡಿದರೆ ವಾರಗಟ್ಟಲೇ ಶಾಲೆಗಳಲ್ಲಿ ಮಕ್ಕಳಿಗೆ ಪಾಠಕ್ಕೆ ತೊಂದರೆಯಾಗುತ್ತದೆ. ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಹೀಗಾಗಿ ಗಣತಿ ಸಮೀಕ್ಷೆಗೆ ಸರ್ಕಾರಿ ಶಿಕ್ಷಕರನ್ನು ಬಳಕೆ ಮಾಡುತ್ತಿಲ್ಲ ಎಂದು ಹೇಳಿದರು.