ಮೈಸೂರು: ಚೆಕ್ ಬೌನ್ಸ್ ಕೇಸ್ ನಲ್ಲಿ ಕೋರ್ಟ್ ಗೆ ಹಾಜರಾಗದ ಕಾರಣ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
ಮೈಸೂರಿನ ಕೋರ್ಟ್ ಗೆ ಚೆಕ್ ಬೌನ್ಸ್ ಕೇಸ್ ಸಂಬಂಧ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಜರಾಗಬೇಕಿತ್ತು. ಆದರೇ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಕಾರಣ, ಕೋರ್ಟ್ ಮುಂದೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಈ ಹಿನ್ನಲೆಯಲ್ಲಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಮುಡಾ ದೂರುದಾರ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ, ಬಿಗ್ ಶಾಕ್ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಅವರು, ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ಕಾರಣ ಕೋರ್ಟ್ ಗೆ ಹಾಜರಾಗಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಕೋರ್ಟ್ ಗೆ ಹಾಜರಾಗುತ್ತೇನೆ. ಜಾಮೀನು ರಹಿತ ವಾರೆಂಟ್ ರೀ ಕಾಲ್ ಮಾಡಿಸುವುದಾಗಿ ಸ್ಪಷ್ಟ ಪಡಿಸಿದರು.