ವಿಜಯಪುರ : ರಾಜ್ಯದಲ್ಲಿ ಕೆಲವು ದಿನಗಳ ಹಿಂದೆ ಸಿಎಂ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡಲಾಗುತ್ತೆ ಎಂದು ಅಲಲ್ಲಿ ಈ ಮಾತು ಕೇಳಿ ಬರುತ್ತಿತ್ತು. ಆದರೆ ಯಾವಾಗ ಹೈಕಮಾಂಡ್ ನಾಯಕರು ರಾಜ್ಯದ ನಾಯಕರಿಗೆ ಖಡಕ್ ಎಚ್ಚರಿಕೆ ಕೊಟ್ಟರೊ ಅವಾಗಿನಿಂದ ಸಿಎಂ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಚರ್ಚೆ ನಿಂತು ಹೋಯ್ತು. ಇದೀಗ ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ಉತ್ತರ ಕರ್ನಾಟಕದ ಈ ನಾಯಕನಿಗೆ ಭವಿಷ್ಯದಲ್ಲಿ ಸಿಎಂ ಆಗುವ ಯೋಗ ಇದೆ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.
ಹೌದು ಕೋಡಿ ಮಠದ ಸ್ವಾಮೀಜಿಗಳ ಭವಿಷ್ಯದ ಬಗ್ಗೆ ಸಾಕಷ್ಟು ಕುತೂಹಲವಂತೂ ಇದ್ದೇ ಇರುತ್ತದೆ. ರಾಜ್ಯ ಮಳೆ, ಬೆಳೆ, ರಾಜಕಾರಣದ ಬಗ್ಗೆ ಭವಿಷ್ಯ ನುಡಿದು ಗಮನ ಸೆಳೆಯುತ್ತಾರೆ. ಇದೀಗ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆಯ ಚರ್ಚೆ ಆಗಾಗ ಚರ್ಚೆಗೆ ಬರುತ್ತಲೇ ಇರುತ್ತದೆ.
ಡಾ.ಶಿವಯೋಗಿ ಶಿವಾನಂದ ಸ್ವಾಮೀಜಿಯವರು ವಿಜಯಪುರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿ, ಇತ್ತೀಚೆಗೆ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದೆ. ಈ ವೇಳೆ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಪ್ರಸ್ತಾಪವಾಯಿತು. ಈ ವೇಳೆ ಉತ್ತರ ಕರ್ನಾಟಕದಿಂದ ಯಾರಿಗೆ ಮುಖ್ಯಮಂತ್ರಿ ಸ್ಥಾನ ಎಂದು ಕೇಳಿದಾಗ ಸಚಿವ ಎಂ.ಬಿ.ಪಾಟೀಲ್ ಅವರ ಹೆಸರು ಬಂತು. ಎಂಬಿ ಪಾಟೀಲ್ ಅವರು ತುಂಬಾ ಒಳ್ಳೆಯ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದು ಕೋಡಿಶ್ರೀಗಳು ಹೇಳಿದ್ದಾರೆ.
ಉತ್ತರ ಕರ್ನಾಟಕ ಭಾಗದಿಂದ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಯಾಗಲಿ ಎಂದು ಕೋಡಿಮಠದ ಶ್ರೀಗಳು ಹೇಳಿಕೆ ನೀಡಿದ್ದಾರೆ. ಅಲ್ಲದೆ ಎಂಬಿ ಪಾಟೀಲ್ ಅವರ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಹಾಗಾಗಿ ಉತ್ತರ ಕರ್ನಾಟಕ ಭಾಗದ ನಾಯಕರ ಪೈಕಿ ಎಂಬಿ ಪಾಟೀಲ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗ ಇದೆ ಎಂದು ಕೋಡಿಶ್ರೀಗಳು ಹೇಳಿದ್ದಾರೆ.