ಚಿಕ್ಕಮಗಳೂರು : ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ರಾತ್ರೋರಾತ್ರಿ ತಹಶೀಲ್ದಾರ್ ದಂಪತಿಗಳು ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಕೊಪ್ಪ ತಾಲೂಕಿನ ತಹಸೀಲ್ದಾರ್ ಲಿಖಿತಾ ಮೋಹನ್ ಅವರಿಂದ ಏಕಕಾಲಕ್ಕೆ ದಾಳಿ ನಡೆದಿದೆ. ದಾಳಿಯ ವೇಳೆ 4 ಪಿಕಪ್ ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದು 6 ಜನರನ್ನು ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ತುಂಗಾ ನದಿಯಲ್ಲಿ ಅಕ್ರಮವಾಗಿ ಮರಳು ಮಾಫಿಯಾ ನಡೆಸುತ್ತಿರುವ ಮಾಹಿತಿ ಬಂದಿದೆ.
ಈ ವೇಳೆ ಖಚಿತ ಮಾಹಿತಿಯ ಮೇರೆಗೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಏಕಕಾಲಕ್ಕೆ ಹಲವು ಕಡೆಗಳಲ್ಲಿ ದಾಳಿ ನಡೆಸಲಾಗಿದೆ. ಅಡ್ಡಗದ್ದೆ ಕಲ್ಕಟ್ಟೆಯಲ್ಲಿ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಲಾಗಿದೆ ಮರಳು ದಂಧೆ ತಡೆಯುವಲ್ಲಿ ಪೊಲೀಸ್ ಇಲಾಖೆ ವೈಫಲ್ಯ ಆಗಿದೆ ಎಂಬ ಆರೋಪ ಕೇಳಿ ಬಂದಿದೆ. ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್ಐಆರ್ ದಾಖಲಾಗಿದೆ.