ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಿ OPS ಜಾರಿ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿರುವುದು ಸಂತಸ ತಂದಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಹಾಗೂ ಜಿಲ್ಲೆ-ತಾಲ್ಲೂಕು ಶಾಖೆಗಳ ನಿರ್ದೇಶಕರು-ಪದಾಧಿಕಾರಿಗಳ ಸಮಾವೇಶವು ನಿರೀಕ್ಷೆಗೂ ಮೀರಿ ಯಶಸ್ಸನ್ನು ಕಂಡಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್‌ರವರು ಭಾಗವಹಿಸಿ, ಓಪಿಎಸ್ ಜಾರಿಗೊಳಿಸುವ ಸ್ಪಷ್ಟ ಸಂದೇಶ ನೀಡಿರುವುದು ರಾಜ್ಯ ಎನ್‌ಪಿಎಸ್ ನೌಕರರಿಗೆ ಅತೀವ ಸಂತಸ ತಂದಿದೆ. ಇದರ ಜೊತೆ ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಶೀಘ್ರ ಜಾರಿಗೊಳಿಸುವ ಭರವಸೆಯು ನೌಕರರಿಗೆ ಸಂತೋಷ ತಂದಿದೆ.
ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಜಿಲ್ಲಾಧ್ಯಕ್ಷರುಗಳು, ತಾಲ್ಲೂಕು ಅಧ್ಯಕ್ಷರು, ಯೋಜನಾ ಶಾಖೆಯ ಅಧ್ಯಕ್ಷರು, ಜೊತೆಗೆ ತಾಲ್ಲೂಕು-ಜಿಲ್ಲಾ ಹಂತದ ಪದಾಧಿಕಾರಿಗಳು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು, ಜೊತೆಗೆ ಭಾಗವಹಿಸಿದ ಎಲ್ಲಾ ನಿರ್ದೇಶಕ ಬಂಧುಗಳಿಗೆ ತುಂಬುಹೃದಯದ ಕೃತಜ್ಞತೆಗಳೊಂದಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.