ಹುಬ್ಬಳ್ಳಿ : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಸದನದ ವೇಳೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅಶ್ಲೀಲ ಪದ ಬಳಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು, ಮೇಲ್ಮನೆಯಲ್ಲಿ ಸಿಐಡಿ ಅಧಿಕಾರಿಗಳಿಗೆ ಮಹಾಜರು ನಡೆಸಲು ಅನುಮತಿ ನೀಡಲ್ಲ ಎಂದು ಸ್ಪಷ್ಟಪಡಿಸಿದರು.
ಇಂದು ಹುಬ್ಬಳ್ಳಿಯಲ್ಲಿ ಸಭಾಪತಿ ಬಸವರಾಜ್ ಹೊರಟ್ಟಿ ಮಾಧ್ಯಮಗಳೊಂದಿಗೆ ಮಾತನಾಡಿದ ಆವರು, ಸಿಐಡಿಯವರು ಯಾವ ರೀತಿ ಸ್ಥಳ ಮಹಜರು ಮಾಡ್ತಾರೆ ಎಂದು ಹೇಳಬೇಕಾಗುತ್ತದೆ. ಅಲ್ಲೇನು ಕುರ್ಚಿ ಅಥವಾ ಟೇಬಲ್ ಸ್ಥಳ ಮಹಜರು ಮಾಡುತ್ತಾರೋ? ಅಥವಾ ಸದನಕ್ಕೆ ಕರೆದುಕೊಂಡು ಬಂದು ಮಾಡುತ್ತಾರೆ ಎನ್ನುವುದನ್ನು ಹೇಳಬೇಕು. ಯಾವ ರೀತಿ ಪಂಚನಾಮೆ ಮಾಡುತ್ತಾರೆ ಅನೋದನ್ನ ಸಿಐಡಿ ಹೇಳಲಿ. ಪಂಚನಾಮೆ ಮಾಡ್ತಾರೆ ಅಂದರೆ ಹೇಗೆ ಮಾಡ್ತಾರೆ ಎಂದು ಅವರು ಪ್ರಶ್ನಿಸಿದರು.
ಸೂಕ್ತವಾದ ಕಾರಣವನ್ನು ಸಿಐಡಿ ನಮಗೆ ಕೊಡಲಿ. ಸದನ ಅಡ್ಡನ್ ಆಗಿದೆ. ಹೀ ಗಾಗಿ ನಮ್ಮೆ ಕ್ಯಾಮೆರಾ, ಆಡಿಯೋ, ವಿಡಿಯೋ ಆಟೋಮ್ಯಾಟಿಕ್ ಆಗಿ ಬಂದ್ ಆಗುತ್ತವೆ. ಸದನ ಮುಂದೂಡಲಾಗಿದೆ ಎಂದು ಹೇಳಿ ನಾನು ಒಂದು ಹೆಜ್ಜೆ ಮುಂದಿಟ್ಟರೂ ವಿಡಿಯೋ ಆಡಿಯೋ ಬಂದ್ ಆಗುತ್ತದೆ. ನಮಗೆ ಆ ವಿಡಿಯೋ, ಆಡಿಯೋ ಸಿಕ್ಕಿಲ್ಲ. ಮಾಧ್ಯಮಗಳು ಆಡಿಯೋ, ವಿಡಿಯೋ ಕೊಟ್ಟರೂ ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸುತ್ತೇನೆ ಎಂದರು.
ಸದನ ಲಾಕ್ ಆಗಿದೆ. ಸದನದ ಒಳಗಡೆ ಬಡಿದಾಟ ಹೊಡೆದಾಟವಾಗಿಲ್ಲ. ಪಂಚನಾಮೆ ಮಾಡಬೇಕು ಅಂದರೆ ಯಾವರೀತಿ ಮಾಡಬೇಕು ಎನ್ನುವುದನ್ನು ಸಿಐಡಿ ಹೇಳಲಿ. ಅನುಮತಿ ಕೊಡಬೇಕೋ ಕೊಡಬಾರದೋ ಅನೋದನ್ನ ಹೇಳೋಕೆ ಆಗೋದಿಲ್ಲ. ಪರಿಶೀಲನೆ ಮಾಡುತ್ತೇನೆ. ಸದ್ಯಕ್ಕೆ ಸಿಐಡಿ ಅಧಿಕಾರಿಗಳಿಗೆ ಸದನದಲ್ಲಿ ಸ್ಥಳ ಮಹಜರಿಗೆ ಅನುಮತಿ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.