ಬೆಂಗಳೂರು : ಬೇಡಿಕೆ ಈಡೇರಿಸದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 5ರಂದು ಸಾರಿಗೆ ನೌಕರರಿಂದ ಮುಷ್ಕರಕ್ಕೆ ಕರೆ ಹಿನ್ನೆಲೆಯಲ್ಲಿ, ಇದೀಗ ಕೊನೆಗೂ ಸಾರಿಗೆ ನೌಕರರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಲು ನಿರ್ಧರಿಸಿದ್ದಾರೆ.
ಹೌದು ಆಗಸ್ಟ್ 4 ರಂದು ಬೆಳಿಗ್ಗೆ 11:30 ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಾರಿಗೆ ನೌಕರರ ಮುಖಂಡರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಈ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದಿದ್ದ ಎರಡು ಸಭೆಗಳು ಸಹ ಅಪೂರ್ಣಗೊಂಡಿತ್ತು. ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಆಗಸ್ಟ್ 5ರಂದು ಮುಷ್ಕರಕ್ಕೆ ನಿರ್ಧರಿಸಿದ್ದಾರೆ.
ಹಾಗಾಗಿ ಸಾರಿಗೆ ನೌಕರರ ಜೊತೆಗೆ ಸಿಎಂ ಸಿದ್ದರಾಮಯ್ಯ ಆಗಸ್ಟ್ ನಾಲ್ಕರಂದು ಬೆಳಿಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಸಾರಿಗೆ ನೌಕರರ ಮುಖಂಡರ ಜೊತೆಗೆ ಸಭೆ ನಡೆಸಲಿದ್ದಾರೆ. ಬೇಡಿಕೆ ಈಡೇರಿಸದಿದ್ದರೆ ಮುಷ್ಕರ ಹಿಂಪಡೆಯಲ್ಲ ಎಂದು ಸಾರಿಗೆ ನೌಕರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.