ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಬೈಕ್ ಮತ್ತು ತ್ರಿಚಕ್ರ ವಾಹನಗಳಿಗೆ ಪ್ರವೇಶ ನಿರ್ಭಂಧಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಬೈಕ್ ಮತ್ತು ತ್ರಿಚಕ್ರ ವಾಹನಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಫೆಬ್ರವರಿ 13 ರಿಂದ 18ರವರೆಗೆ ಬೈಕ ಹಾಗೂ ತ್ರಿಚಕ್ರ ವಾಹನಗಳಿಗೆ ಪ್ರವೇಶ ಇಲ್ಲ. ಮಹಾಶಿವರಾತ್ರಿ ಹಿನ್ನೆಲೆ ಲಕ್ಷಾಂತರ ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಾರೆ. ಕಿರಿದಾದ ರಸ್ತೆ ಹಾಗೂ ಕಾಡು ರಸ್ತೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳಿಗೆ ನಿರ್ಬಂಧ ವಿಧಿಸಿದೆ. ರಾಜ್ಯದ ವಿವಿಧಡೆ ಹಾಗೂ ಹೊರ ರಾಜ್ಯದಿಂದಲೂ ಕೂಡ ಭಕ್ತರು ಆಗಮಿಸುತ್ತಾರೆ.ಹಾಗಾಗಿ ತಾತ್ಕಾಲಿಕವಾಗಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.








