ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ನಾವು ಆಹಾರ ಇಲಾಖೆಯ ಅಧಿಕಾರಿಗಳು ಎಂದು ಹೇಳಿ ಕಿರಾಣಿ ಅಂಗಡಿ ಮೇಲೆ ನಕಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ ಅಂಗಡಿ ಮಾಲೀಕರು ತೀವ್ರ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ನಕಲಿ ಅಧಿಕಾರಿಗಳ ಮುಖವಾಡ ಕಳಚಿ ಬಿದ್ದಿದ್ದು, ಘಟನೆಯಲ್ಲಿ ಅಂಗಡಿ ಮಾಲೀಕರು ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೊರ್ವ ಆರೋಪ ಪರಾರಿಯಾಗಿರುವ ಘಟನೆ ನಡೆದಿದೆ.
ಹೌದು ದಾಳಿಯ ವೇಳೆ ನಕಲಿ ಅಧಿಕಾರಿಗಳ ಬೆವರಿಳಿಸಿದ ಕಿರಾಣಿ ಅಂಗಡಿಗಳ ಮಾಲೀಕರು, ಮೊದಲು ನಾವು ಆಹಾರ ಇಲಾಖೆ ಅಧಿಕಾರಿಗಳು ಅಂತ ಹೇಳಿ ನಕಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಮೀಡಿಯಾದವರೆಂದು ಪರಾರಿಗೆ ಯತ್ನಿಸಿದ್ದಾರೆ.ಈ ವೇಳೆ ಮಂಜುನಾಥ್ ನನ್ನು ಹಿಡಿದು ಅಂಗಡಿ ಮಾಲೀಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಮತ್ತೋರ್ವ ನಕಲಿ ಫುಡ್ ಆಫೀಸರ್ ಲಕ್ಷ್ಮಣ್ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಹುಬ್ಬಳ್ಳಿ ಘಂಡಿಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.