ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿ ಮುಂದುವರೆದಿದ್ದು ಇಂದು ಸಹ ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕೂಲಿ ಕಾರ್ಮಿಕ ಮಹಿಳೆ ಅನಿತಾ ಕಾಡಾನೆ ದಾಳಿಗೆ ಬಲಿಯಾದವರು ಎಂದು ತಿಳಿದುಬಂದಿದೆ.
ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬನ್ನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೂಲಿಕಾರ್ಮಿಕ ಮಹಿಳೆ ಅನಿತಾ ಕೆಲಸ ಮುಗಿಸಿ ಮನೆಗೆ ಬರುವಾಗ ಕಾಡಾನೆ ದಾಳಿ ನಡೆಸಿದೆ.
ದಾಳಿಗೊಳಗಾದ ಅನಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಕುಡಿದಂತೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.