ಬೆಂಗಳೂರು: ಪಿಂಚಣಿಯು ಸರ್ಕಾರದಿಂದ ನೇರವಾಗಿ ವೇತನ ಪಡೆಯುವ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸುತ್ತದೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಅಕಾಡೆಮಿ ಮತ್ತು ಮಂಡಳಿಯ ನೌಕರರಿಗೆ ಪಿಂಚಣಿ ಪಾವತಿಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಪುರಸ್ಕರಿಸಿದ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ವಿಜಯಕುಮಾರ್ ಎ.ಪಾಟೀಲ್ 9 ಅವರಿದ್ದ ವಿಭಾಗೀಯ ಪೀಠವು ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ಮದ್ಯಪಾನ ಸಂಯಮ ಮಂಡಳಿಯ ನೌಕರರು ಸರ್ಕಾರಿ ನೌಕರರಲ್ಲದ ಕಾರಣ ಪಿಂಚಣಿಗೆ ಅರ್ಹರಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ನಿಯಮಗಳ ಪ್ರಕಾರ, ಪಿಂಚಣಿಯು ಸರ್ಕಾರದಿಂದ ನೇರವಾಗಿ ವೇತನ ಪಡೆಯುವ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸುತ್ತದೆ. ಆದರೆ, ಇತರ ಸಂಸ್ಥೆಗಳ ನೌಕರರಿಗೆ ಪಿಂಚಣಿ ವಿಸ್ತರಿಸಿದ ಉದಾಹರಣೆಗಳನ್ನು ಗಮನಿಸಿರುವ ನ್ಯಾಯಪೀಠವು ಮಾಧ್ಯಮ ಅಕಾಡೆಮಿ ಮತ್ತು ಮದ್ಯಪಾನ ಸಂಯಮ ಮಂಡಳಿ ನೌಕರರು ಸಲ್ಲಿಸಿದ ಮನವಿಯ ಬಗ್ಗೆ 4 ತಿಂಗಳೊಳಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಿದೆ.








