ರಾಮನಗರ : ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಉಭಯ ಪಕ್ಷಗಳಿಂದ ಭರ್ಜರಿ ಪ್ರಚಾರ ನಡೆಯುತ್ತಿದ್ದು, ಇದೀಗ ರಾಮನಗರ ಜಿಲ್ಲೆಯ ಚೆನ್ನಪಟ್ಟಣದ ದಶವಾರ ಗ್ರಾಮದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರವಾದ ಆರೋಪ ಮಾಡಿದ್ದು, 3 ವಿಧಾನಸಭಾ ಉಪಚುನಾವಣೆಗೆ ಕೋಟಿ ರೂಪಾಯಿ ಹಣ ಬಳಸಿದ್ದಾರೆ ಎಂದು ಗಂಭೀರವಾದ ಆರೋಪ ಮಾಡಿದರು.
ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, NDS ಅಭ್ಯರ್ಥಿ ನಿಖಿಲ್ ಗೆ ಬೆಂಬಲ ನೀಡಿದರೆ ಮೋದಿಗೆ ಬೆಂಬಲ ನೀಡಿದಂತೆ.ಭ್ರಷ್ಟ ಕಾಂಗ್ರೆಸ್ ಸರ್ಕಾರ ತೊಲಗಬೇಕು ಅನ್ನೋದು ಎಲ್ಲರ ಆಶಯವಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಜನರಿಗೆ ಟೋಪಿ ಹಾಕುತ್ತಿದೆ. ರೈತಪರ ಸರ್ಕಾರ ಎಂದು ಹೇಳುತ್ತಿರುವವರು ಏನು ಮಾಡಿದ್ದಾರೆ? ಎಂದು ಪ್ರಶ್ನಿಸಿದರು.
ಬೆಂಗಳೂರು ಮುಳುಗುತ್ತಿದೆ. ಸರ್ಕಾರ ಏನು ಮಾಡುತ್ತಿದೆ. ರಾಜ್ಯದಲ್ಲಿರುವುದು ಕಾಪರ್ ಸರ್ಕಾರ. ನೀವು ಯಾಮಾರಿದರೆ ಮುಂದೆ ಮತ್ತಷ್ಟು ತೆರಿಗೆ ವಿಧಿಸುತ್ತಾರೆ. ಪ್ರತಿ ಬಾರ್ಗು ಅಮೌಂಟ್ ಫಿಕ್ಸ್ ಮಾಡಿದ್ದಾರೆ. ಭಾರ ಗಳಿಂದ ವರ್ಷಕ್ಕೆ 900 ಕೋಟಿ ವಸೂಲಿ ಮಾಡುತ್ತಿದ್ದಾರೆ. ಮಹಾರಾಷ್ಟ್ರ ಚುನಾವಣೆಗೆ ರೂ.700 ಕೋಟಿ ಹಣ ಕಳುಹಿಸಿದ್ದಾರೆ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಎರಡು ನೂರು ಕೋಟಿ ಬಳಕೆ ಮಾಡಿದ್ದಾರೆ ಎಂದು ಆರ್ ಅಶೋಕ್ ಗಂಭೀರ ಆರೋಪ ಮಾಡಿದರು.
ಬಸ್ ರೇಟ್ ಜಾಸ್ತಿ ಆಗುತ್ತೆ ಎಂದು ಡಿಕೆ ಶಿವಕುಮಾರ್ ಸುಳಿವು ನೀಡಿದ್ದಾರೆ. ನಾನು ತಪ್ಪು ಮಾಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳುತ್ತಾರೆ. ಸಿದ್ದರಾಮಯ್ಯ ಅವರ ಬಿಳಿ ಪುಸ್ತಕ ಕಪ್ಪಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ದಶವಾರ ಗ್ರಾಮದಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದರು.