Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಮ್ಮ ಸರ್ಕಾರ 5 ಗ್ಯಾರಂಟಿಗಳ ಎಲ್ಲಾ ಧರ್ಮದ ಬಡವರ ಖಾತೆಗಳಿಗೆ 56 ಸಾವಿರ ಕೋಟಿ ರೂ. ಹಾಕಿದ್ದೇವೆ : CM ಸಿದ್ದರಾಮಯ್ಯ
KARNATAKA

BIG NEWS : ನಮ್ಮ ಸರ್ಕಾರ 5 ಗ್ಯಾರಂಟಿಗಳ ಎಲ್ಲಾ ಧರ್ಮದ ಬಡವರ ಖಾತೆಗಳಿಗೆ 56 ಸಾವಿರ ಕೋಟಿ ರೂ. ಹಾಕಿದ್ದೇವೆ : CM ಸಿದ್ದರಾಮಯ್ಯ

By kannadanewsnow57

ಹಾವೇರಿ : ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಮೂಲಕ ಎಲ್ಲಾ ಜಾತಿಯ, ಎಲ್ಲಾ ಧರ್ಮದ ಬಡವರ ಖಾತೆಗಳಿಗೆ ನೇರವಾಗಿ 56 ಸಾವಿರ ಕೋಟಿ ರೂಪಾಯಿಯನ್ನು ಹಾಕಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ಆಯೋಜಿಸಿದ್ದ ಚುನಾವಣಾ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಮ್ಮ ಸರ್ಕಾರ ಐದು ಗ್ಯಾರಂಟಿಗಳ ಮೂಲಕ ಇಡೀ ರಾಜ್ಯದ ಮಹಿಳೆಯರಿಗೆ ಆರ್ಥಿಕ‌ ಶಕ್ತಿ ನೀಡಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದ ಬಡವರ ಖಾತೆಗಳಿಗೆ ನೇರವಾಗಿ 56 ಸಾವಿರ ಕೋಟಿ ರೂಪಾಯಿಯನ್ನು ಹಾಕಿದ್ದೇವೆ ಎಂದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಲು ಬಸವರಾಜ ಬೊಮ್ಮಾಯಿ ಅವರು ಪ್ಲಾನ್ ಮಾಡಿದ್ದರು. ಅದಕ್ಕೇ ಜೊತೆಯಲ್ಲಿದ್ದೇ ಯಡಿಯೂರಪ್ಪ ಅವರಿಗೆ ಟಾಂಗ್ ಕೊಟ್ಟರು.‌ ಪ್ರಧಾನಿ ನರೇಂದ್ರ ಮೋದಿ ಮಹಾನ್ ಸುಳ್ಳುಗಾರ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗ್ತೀನಿ ಎಂದು ದೇವೇಗೌಡರು ಹೇಳಿದ್ದರು. ಈಗ ಇಬ್ಬರೂ ಭಾಯಿ – ಭಾಯಿ ಆಗಿದ್ದಾರೆ ಎಂದರು.

ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಅಭ್ಯರ್ಥಿಯನ್ನು ಆರಿಸುವ ಮತ್ತೊಂದು ಅವಕಾಶ ಶಿಗ್ಗಾಂವಿ ಕ್ಷೇತ್ರದ ಜನತೆಗೆ ಸಿಕ್ಕಿದೆ. ಇಲ್ಲಿನ‌ ಬಿಜೆಪಿ ಅಭ್ಯರ್ಥಿ ಅತ್ಯಂತ ಶ್ರೀಮಂತ ಕುಟುಂಬದಿಂದ ಬಂದವರು. ಅವರಿಗೆ ಹಳ್ಳಿ ಬದುಕು ಗೊತ್ತಿಲ್ಲ. ಬಡವರ ಬದುಕು ಗೊತ್ತಿಲ್ಲ. ಆದರೆ ಕಾಂಗ್ರೆಸ್ ಅಭ್ಯರ್ಥಿ ಅತ್ಯಂತ ಸಾಮಾನ್ಯ ಕುಟುಂಬದಿಂದ ಬಂದು ಬಡವರ ಕಷ್ಟ, ಸುಖ ಗೊತ್ತಿರುವವರು‌. ಇವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕಾರಿ ಆಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅವರು ಕುಟುಂಬ ರಾಜಕಾರಣದ ಬಗ್ಗೆ ಭರ್ಜರಿ ಭಾಷಣ ಮಾಡ್ತಾರೆ. ಆದರೆ ಇಲ್ಲಿ ಮಾಜಿ ಮುಖ್ಯಮಂತ್ರಿಯ ಮೊಮ್ಮಗ, ಮಾಜಿ ಮುಖ್ಯಮಂತ್ರಿಯ ಮಗನಿಗೆ ಟಿಕೆಟ್ ನೀಡಿದ್ದಾರೆ. ಇದು ಕುಟುಂಬ ರಾಜಕಾರಣ ಅಲ್ಲವೇ ಮೋದಿಯವರೇ?

ನಾನು ನಾಡಿನ ಜನತೆಯ ಪ್ರೀತಿ, ಒತ್ತಾಯಗಳಿಗೆ ಬಗ್ಗುತ್ತೇನೆಯೇ ಹೊರತು, ಬಿಜೆಪಿ ಮತ್ತು ದೇವೇಗೌಡರ ಷಡ್ಯಂತ್ರಗಳಿಗೆ ಬಗ್ಗದೂ ಇಲ್ಲ, ಜಗ್ಗದೂ ಇಲ್ಲ. ಎಲ್ಲಿಯವರೆಗೆ ರಾಜ್ಯದ ಜನರ ಆಶೀರ್ವಾದ ಇರುತ್ತದೋ ಅಲ್ಲಿಯವರೆಗೂ ನಾನು ಬಿಜೆಪಿ ಕುತಂತ್ರಗಳಿಗೆ ಬಗ್ಗುವುದಿಲ್ಲ.

40 ವರ್ಷಗಳಿಂದ ನಾನು ಮಂತ್ರಿ, ಮುಖ್ಯಮಂತ್ರಿ ಹೀಗೆ ವಿವಿಧ ಹುದ್ದೆಯಲ್ಲಿ ಸೇವೆ ಮಾಡಿದ್ದೇನೆ. ಸಣ್ಣ ಕಪ್ಪು ಚುಕ್ಕೆ ಕೂಡ ನನ್ನ ಮೇಲಿಲ್ಲ. ಆದರೂ ನನ್ನ ಪತ್ನಿ ಮೇಲೆ ಸುಳ್ಳು ಆರೋಪ ಮಾಡಿ ನನ್ನನ್ನು ತೇಜೋವಧೆ ಮಾಡುತ್ತಿದ್ದಾರೆ.

ಕೇವಲ 14 ಸೈಟುಗಳಿಗಾಗಿ ನಾನು ತಪ್ಪು ಮಾಡ್ತೀನಾ? ದುಡ್ಡು ಮಾಡಬೇಕು ಎಂದಿದ್ದರೆ ಬೇಕಾದಷ್ಟು ಮಾಡಬಹುದಿತ್ತು. ಆದರೆ ನನ್ನ ತಪ್ಪುಗಳು ಏನೇನೂ ಇಲ್ಲದ ಕಾರಣದಿಂದ ಸುಳ್ಳು ಆರೋಪ ಹೊರಿಸಿ ಷಡ್ಯಂತ್ರ ಹೆಣೆದು ನನ್ನನ್ನು ಕೆಳಗಿಳಿಸಲು ಯತ್ನಿಸುತ್ತಿದ್ದಾರೆ. ಇದಕ್ಕೆ ನಾಡಿನ ಜನತೆ ಅವಕಾಶ ಕೊಡುವುದಿಲ್ಲ ಎನ್ನುವ ಗ್ಯಾರಂಟಿ ನನಗಿದೆ.

ಚೆಕ್‌ನಲ್ಲಿ ಲಂಚ ಪಡೆದ ವಿಜಯೇಂದ್ರ ಈಗ ನನ್ನ ಬಗ್ಗೆ ಮಾತಾಡುತ್ತಿದ್ದಾರೆ. ವಿಜಯೇಂದ್ರ ಹೇಗೆ ದುಡ್ಡು ಹೊಡೆಯುತ್ತಾ ಕೂತಿದ್ದರು ಎನ್ನುವುದನ್ನು ಅವರದೇ ಪಕ್ಷದ ಯತ್ನಾಳ್, ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ.

ಚೆಕ್ ನಲ್ಲಿ ಲಂಚ ಪಡೆದ ವಿಜಯೇಂದ್ರ ಒಂದು ಕಡೆ, ಲೂಟಿ ರವಿ ಮತ್ತೊಂದು ಕಡೆ ನಮ್ಮ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಇವರ ಯೋಗ್ಯತೆ ನಾಡಿನ ಜನತೆಗೆ ಗೊತ್ತಿದೆ.

ಬಿಜೆಪಿಯವರು ಅಧಿಕಾರ ಇದ್ದಾಗ ಕೇವಲ ಭ್ರಷ್ಟಾಚಾರ ಮಾಡಿ, ಹಣ ಲೂಟಿ ಮಾಡಿ ಮನೆಗೆ ಹೋದರು. ಈಗ ಜಾತಿ-ಧರ್ಮದ ಹೆಸರಿನಲ್ಲಿ ಬಡವರನ್ನು ಪರಸ್ಪರ ಎತ್ತಿ ಕಟ್ಟಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ.

ನಾವು ಹಿಂದೆಯೂ ಅಷ್ಟೆ, ಈಗಲೂ ಅಷ್ಟೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನುಡಿದಂತೆ ನಡೆದ ನೈತಿಕತೆ ಆಧಾರದಲ್ಲಿ‌ ಮತ್ತೆ ಜನರ ಬಳಿಗೆ ಬಂದು ಮತ ಕೇಳುತ್ತಿದ್ದೇವೆ. ಬಸವರಾಜ ಬೊಮ್ಮಾಯಿ ಅವರು ಅವರ ಮಗನಿಗೆ ಓಟು ಕೇಳಲು ಯಾವ ನೈತಿಕತೆ ಇದೆ?

ಮಾತೆತ್ತಿದರೆ ದಮ್ಮು, ತಾಖತ್ತು ಎನ್ನುವ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ರಾಜ್ಯಕ್ಕಾಗಲಿ, ಕ್ಷೇತ್ರಕ್ಕಾಗಲಿ ಏನು ಕೊಟ್ಟಿದ್ದಾರೆ ಹೇಳಿ? ಆದ್ದರಿಂದ ಪಠಾಣ್ ಅವರನ್ನು ಗೆಲ್ಲಿಸಿ ಕಳುಹಿಸಿ. ಅಜ್ಜಂಪೀರ್ ಖಾದ್ರಿ ಅವರಿಗೂ ಒಳ್ಳೆಯ ಅವಕಾಶ ಕಲ್ಪಿಸುತ್ತೇನೆ ಎಂದು ತಿಳಿಸಿದ್ದಾರೆ.

BIG NEWS : ನಮ್ಮ ಸರ್ಕಾರ 5 ಗ್ಯಾರಂಟಿಗಳ ಎಲ್ಲಾ ಧರ್ಮದ ಬಡವರ ಖಾತೆಗಳಿಗೆ 56 ಸಾವಿರ ಕೋಟಿ ರೂ. ಹಾಕಿದ್ದೇವೆ : CM ಸಿದ್ದರಾಮಯ್ಯ BIG NEWS: Our government has given 56 thousand crore rupees to the accounts of poor people of all religions under 5 guarantees. Posted by: CM Siddaramaiah
Share. Facebook Twitter LinkedIn WhatsApp Email

Related Posts

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

2 Mins Read

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

1 Min Read
Recent News

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

BREAKING: ಜಾಗತಿಕವಾಗಿ ಚಾಟ್‌ಜಿಪಿಟಿ ಸರ್ವರ್ ಡೌನ್, ಕೋಟ್ಯಂತರ ಬಳಕೆದಾರರು ಕಂಗಾಲು | ChatGPT down

State News
KARNATAKA

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ಬಡ ಕುಟುಂಬದ ಜಮೀನಿಗೆ ನುಗ್ಗಿ, ಬೆಳೆದು ನಿಂತಿದ್ದ ಫಸಲನ್ನು ಕಿತ್ತು ಹಾಕಿರುವುದು…

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.