ಬೆಂಗಳೂರು : 2025 26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಮಕ್ಕಳ ದಾಖಲಾತಿ ಹೆಚ್ಚಿಸಲು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮ ಏರ್ಪಡಿಸಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ಶಿಕ್ಷಣ ಇಲಾಖೆ ಆದೇಶದಲ್ಲಿ ಏನಿದೆ?
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಶಾಲಾ ಶಿಕ್ಷಣವನ್ನು ಬಲವಡಿಸಲು, ರಾಜ್ಯದ ಎಲ್ಲಾ ಮಕ್ಕಳು ಸಾರ್ವತ್ರಿಕ ಶಿಕ್ಷಣಕ್ಕೆ ಒಳಪಡಿಸುವುದು ಅಗತ್ಯವಾಗಿದೆ ಸರ್ಕಾರಿ ಶಾಲೆಗಳಲ್ಲಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಮಕ್ಕಳ ದಾಖಲಾತಿ, ದಾಖಲಾದ ಮಕ್ಕಳು ಶಾಲೆಯಲ್ಲಿ ಪ್ರತಿನಿತ್ಯ ಹಾಜರಾಗಿ, ನಿರಂತರ ಕಲಿಕೆಯಲ್ಲಿ ಭಾಗವಹಿಸಿ, ಉಳಿಯಲು, ಹಲವಾರು ಶೈಕ್ಷಣಿಕ ಸೌಲಭ್ಯಗಳು ಹಾಗೂ ಪ್ರೋತ್ಸಾಹದಾಯಕ ಕೇಂದ್ರ ಮತ್ತು ರಾಜ್ಯ ಸರ್ಕಾರದ ಆರ್ಥಿಕ ಅನುದಾನದಡಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ. ಮಕ್ಕಳ ಕಲಿಕಾ ಗುಣಮಟ್ಟವನ್ನು ಉತ್ತಮಪಡಿಸಲು ಶಾಲಾ ಶಿಕ್ಷಣ ಇಲಾಖೆಯು ಹಲವಾರು ಯೋಜನೆಗಳನ್ನು ರೂಪಿಸಿದೆ.
ಆದಾಗ್ಯೂ ಸಹ, ಇತ್ತೀಚಿನ ವರ್ಷಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ, ಪದ) ಪೂರ್ವ ಕಾಲೇಜುಗಳಲ್ಲಿ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಬೇಕಿದೆ. ಈ ಹಿನ್ನೆಲೆಯಲ್ಲಿ ದಾಖಲಾತಿ ಹಚ್ಛಿಸುವ ಸಂಬಂಧ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಎಂಬ ಕಾರ್ಯಕ್ರಮವು ಶೈಕ್ಷಣಿಕ ಸಂವಾದ ಮತ್ತು ಜಾಗೃತಿಯನ್ನು ಪೋಷಕರಲ್ಲಿ ಮೂಡಿಸಲು ತಾಲ್ಲೂಕು/ವಲಯ ಹಂತದಲ್ಲಿ ಒಂದು ಹಾಗೂ ಹೋಬಳಿ ಮಟ್ಟದಲ್ಲಿ ಒಂದು ದಿನದ ಪ್ರೇರಣಾತ್ಮಕ ಶಾಲಾ ಕಾರ್ಯಕ್ರಮವನ್ನು ಏರ್ಪಡಿಸಲು ಯೋಜಿಸಲಾಗಿದೆ.
ಸರ್ಕಾರಿ ಶಾಲೆಗೆ ಮಕ್ಕಳನ್ನು ದಾಖಲಿಸುವಂತೆ ಪೋಷಕರನ್ನು, ಸಮುದಾಯವನ್ನು ಪ್ರೇರೇಪಿಸಿ. ಉತ್ತೇಜಿಸಲು ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ವಿವಿಧ ಸ್ತರಗಳ ಮೇಲ್ವಿಚಾರಕ ಅಧಿಕಾರಿಗಳಿಂದ, ಕ್ಷೇತ್ರ ಸಂಪನ್ಮೂಲ ಸಿಬ್ಬಂದಿಗಳಿಂದ, ಅಜೀಂ ಪ್ರೇಮ್‌ಜಿ ಫೌಂಡೇಶನ್ ಫಾರ್ ಡೆವಲಪ್ಮೆಂಟ್ (APF) ಸಂಸ್ಥೆಯ ಶೈಕ್ಷಣಿಕ ಸಂಪನ್ಮೂಲ ತಂಡದ ವ್ಯಕ್ತಿಗಳ ಸಹಭಾಗಿತ್ವದಲ್ಲಿ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಈ ಕುರಿತು ಕಾರ್ಯಕ್ರಮದ ಅನುಷ್ಠಾನದ ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದ್ದು, ದಿನಾಂಕ: 29.04.2025 ರಂದು ರಾಜ್ಯ ಮಟ್ಟದ ಶಾಲಾ ಶಿಕ್ಷಣ ಇಲಾಖೆ ಹಾಗೂ ಪದವಿ’ ಪೂರ್ವ ಶಿಕ್ಷಣ ಇಲಾಖೆಯ ಎಲ್ಲಾ ಸ್ತರದ ಅಧಿಕಾರಿಗಳಿಗೆ ಆನ್‌ಲೈನ್ ತರಬೇತಿಯನ್ನು ನೀಡಲಾಗುತ್ತದೆ.
1. “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದ ಉದ್ದೇಶಗಳು :
1.1 ಸಮುದಾಯದಲ್ಲಿ ಶಿಕ್ಷಣದ ಮಹತ್ವ, ಸರ್ಕಾರಿ ಶಾಲೆಗಳಲ್ಲಿ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಬಗ್ಗೆ ಹಾಗೂ ಇಲಾಖೆಯ ಶೈಕ್ಷಣಿಕ ಕಾರ್ಯಕ್ರಮಗಳ, ಪ್ರೋತ್ಸಾಹದಾಯಕ ಯೋಜನೆಗಳ ಕುರಿತು ಪೋಷಕರಲ್ಲಿ ಜಾಗೃತಿ ಮೂಡಿಸುವುದು
1.2 ಮಕ್ಕಳಲ್ಲಿರುವ ಅಪೌಷ್ಠಿಕತೆ ಮತ್ತು ರಕ್ತಹೀನತೆ ನಿವಾರಿಸಲು ಮಧ್ಯಾಹ್ನ ಉಪಾಹಾರ ಯೋಜನೆ, ಕ್ಷೀರಭಾಗ್ಯ ಯೋಜನೆ (ಬಿಸಿ ಹಾಲು) ಮತ್ತು ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ/ಬಾಳೆ ಹಣ್ಣು ರಾಗಿ ಮಾಲ್ಟ್ ವಿತರಣೆಯ ಕಾರ್ಯಕ್ರಮಗಳ ಮೂಲಕ ಮಕ್ಕಳ ನಿರಂತರ ಕಲಿಕೆಗಾಗಿ ಸರ್ಕಾರಿ ಶಾಲೆಗಳಲ್ಲಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ನೀಡುತ್ತಿರುವ ಪೌಷ್ಠಿಕ ಬೆಂಬಲದ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸುವುದು.
1.3 ವಿದ್ಯಾರ್ಥಿಗಳನ್ನು ಸರ್ಕಾರಿ ಶಾಲೆಗಳಲ್ಲಿ ದಾಖಲಿಸುವಂತೆ ಪ್ರೇರೆಪಿಸುವುದು.
2. “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದ ಅನುಷ್ಠಾನದ ಹರಿವು ಮತ್ತು ಜವಾಬ್ದಾರಿ ನಿರ್ವಹಣೆ:
2.1 ರಾಜ್ಯ ಮಟ್ಟದ ಅನುಷ್ಠಾನ ಮತ್ತು ಮೇಲ್ವಿಚಾರಣೆಯ ತಂಡದಲ್ಲಿ ಭಾಗಿದಾರರು:
ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು.
ನಿರ್ದೇಶಕರು ಮಧ್ಯಾಹ್ನ ಉಪಾಹಾರ ಯೋಜನೆ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು.
ಅಪರ ಆಯುಕ್ತರು, ಕಲಬುರಗಿ ವಿಭಾಗ, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ.
ಅಪರ ಆಯುಕ್ತರು, ಧಾರವಾಡ ವಿಭಾಗ, ಶಾಲಾ ಶಿಕ್ಷಣ ಇಲಾಖೆ, ಧಾರವಾಡ,
ನಿರ್ದೇಶಕರು (ಪ್ರೌಢ ಶಿಕ್ಷಣ) ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು.
ನಿರ್ದೇಶಕರು (ಪ್ರಾಥಮಿಕ ಶಿಕ್ಷಣ) ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು.
ನಿರ್ದೇಶಕರು (ಡಿ ಎಸ್ ಇ ಆರ್ ಟಿ) ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು.
ನಿರ್ದೇಶಕರು (ಕೆ ಎಸ್ ಇ ಇ ಬಿ) ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು.
ವ್ಯವಸ್ಥಾಪಕ ನಿರ್ದೇಶಕರು (ಪಠ್ಯ ಪುಸ್ತಕ) ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು.
ನಿರ್ದೇಶಕರು (ಆರ್ ಐ ಇ) ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು.
ನಿರ್ದೇಶಕರು (ಅಲ್ಪಸಂಖ್ಯಾತ ಶಾಲೆಗಳು) ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು.
ನಿರ್ದೇಶಕರು (ಎಸ್.ಐ.ಎಸ್.ಎಲ್.ಇ.ಪಿ) ಶಾಲಾ ಶಿಕ್ಷಣ ಇಲಾಖೆ, ಧಾರವಾಡ.
ಸಹ ನಿರ್ದೇಶಕರು, ಬೆಂಗಳೂರು, ಮೈಸೂರು ಕಲಬುರಗಿ ಮತ್ತು ಬೆಳಗಾವಿ ವಿಭಾಗಗಳು
2.2 ಜಿಲ್ಲಾ ಮಟ್ಟದಲ್ಲಿ ಅನುಷ್ಠಾನದ ಮತ್ತು ಮೇಲಿ ಚಾರಣೆಯ ತಂಡದ ಭಾಗಿದಾರರು:
ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳು, ಜಿಲ್ಲಾ ಪಂಚಾಯತ್
ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ.
ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ.
ಉಪನಿರ್ದೇಶಕರು (ಅಭಿವೃದ್ಧಿ). ಡಯಟ್, ಶಾಲಾ ಶಿಕ್ಷಣ ಇಲಾಖೆ.
ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ.
ಡಿ.ವೈ.ಪಿ.ಸಿ. (ಸಮಗ್ರ ಶಿಕ್ಷಣ ಕರ್ನಾಟಕ) ಉಪನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ.
ಹಿರಿಯ ಉಪನ್ಯಾಸಕರು ಮತ್ತು ಉಪನ್ಯಾಸಕರು, ಡಯಟ್
ಶಿಕ್ಷಣಾಧಿಕಾರಿಗಳು, ಮಧ್ಯಾಹ್ನ ಉಪಾಹಾರ ಯೋಜನೆ, ಜಿಲ್ಲಾ ಪಂಚಾಯತ್
ಜಿಲ್ಲೆಯ ಎಲ್ಲಾ ತಾಲ್ಲೂಕು/ವಲಯಗಳ ಕ್ಷೇತ್ರಶಿಕ್ಷಣಾಧಿಕಾರಿಗಳು.
2.3 ತಾಲ್ಲೂಕು / ವಲಯ ಮಟ್ಟದಲ್ಲಿ ಅನುಷ್ಠಾನದ ಮತ್ತು ಮೇಲ್ವಿಚಾರಣೆಯ ತಂಡದ ಭಾಗಿದಾರರು.:
ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲ್ಲೂಕು ಪಂಚಾಯತ್.
ಕ್ಷೇತ್ರಶಿಕ್ಷಣಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ.
ಪ್ರಾಂಶುಪಾಲರು, ಪದವಿ ಪೂರ್ವ ಶಿಕ್ಷಣ ಇಲಾಖೆ.
ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳು, ಶಾಲಾ ಶಿಕ್ಷಣ ಇಲಾಖೆ.
ಸಹಾಯಕ ನಿರ್ದೇಶಕರು, ಮಧ್ಯಾಹ್ನ ಉಪಾಹಾರ ಯೋಜನೆ, ತಾಲ್ಲೂಕು ಪಂಚಾಯತ್.