Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗರ್ಭಾವಸ್ಥೆಯಲ್ಲಿ ಪ್ಯಾರಸಿಟಮಾಲ್: ಶಿಶುಗಳಲ್ಲಿ ಆಟಿಸಂ, ಎಡಿಎಚ್ಡಿ ಅಪಾಯದ ಬಗ್ಗೆ ಎಚ್ಚರಿಸಿದ ಸಂಶೋಧಕರು

17/08/2025 7:14 AM

WhatsApp ಬಳಕೆದಾರರಿಗೆ ಮಹತ್ವದ ಮಾಹಿತಿ: ಒಂದು ವೀಡಿಯೊ ಕರೆ ನಿಮ್ಮ ಬ್ಯಾಂಕ್ ಖಾತೆಯನ್ನು ಖಾಲಿ ಮಾಡಬಹುದು..!

17/08/2025 7:05 AM

ರಾಜ್ಯದ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇನ್ಮುಂದೆ  ಆಸ್ತಿ ನೋಂದಣಿಗೆ `ಡಿಜಿಟಲ್ ಸಹಿ’ ಕಡ್ಡಾಯ.!

17/08/2025 7:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `SC’ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ : ನ್ಯಾ.ನಾಗಮೋಹನ್ ದಾಸ್ ವರದಿ
KARNATAKA

BIG NEWS : ರಾಜ್ಯದಲ್ಲಿ `SC’ 101 ಜಾತಿಗಳ ಪೈಕಿ 10ಕ್ಕೆ ಅತ್ಯಧಿಕ ಸರ್ಕಾರಿ ನೌಕರಿ : ನ್ಯಾ.ನಾಗಮೋಹನ್ ದಾಸ್ ವರದಿ

By kannadanewsnow5717/08/2025 6:01 AM

ಬೆಂಗಳೂರು : ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು ವರದಿ ಸಲ್ಲಿಸಿದ್ದು, ಈ ವರದಿಯಲ್ಲಿ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳ ಪೈಕಿ 10 ಜಾತಿಗಳು ಮಾತ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೆಚ್ಚು ಪ್ರಾತಿನಿಧ್ಯ ಪಡೆದು ಕೊಂಡಿವೆ ಎಂದು ತಿಳಿಸಿದೆ.

ಆದಿ ದ್ರಾವಿಡ, ಆದಿ ಕರ್ನಾಟಕ’, ಬಂಜಾರ, ಭೋವಿ, ಬಾಂಬಿ, ಚಲವಾದಿ, ಹೊಲೆಯ, ಕೊರಮ, ಮಾದಿಗ, ಸಮಗಾರ ಜಾತಿಗಳ ಜನ ಸರ್ಕಾರದ ವಿವಿಧ ವೃಂದಗಳ ಉದ್ಯೋಗದಲ್ಲಿದ್ದು, ಆದಿ ದ್ರಾವಿಡ ಜಾತಿಯ 5,059, ಆದಿ ಕರ್ನಾಟಕ 20,092, ಬಂಜಾರ 19,691, ಭೋವಿ 12,212, ಬಾಂಬಿ 8,864, ಛಲವಾದಿ 6,985, ಹೊಲೆಯ 34,206, ಕೊರಮ 4,010, ಮಾದಿಗ 21,682, ಸಮಗಾರ ಜಾತಿಯ 2513 ಮಂದಿ ಸರ್ಕಾರಿ ಉದ್ಯೋಗದಲ್ಲಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಿನ್ನೆ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯ ಮುಖ್ಯಾಂಶಗಳು:

•  ಕಳೆದ ವರ್ಷ ಎಸ್‌ಸಿಎಸ್‌‌ಪಿ/ಟಿಎಸ್‌ಪಿ ಕಲ್ಯಾಣ ಕಾರ್ಯಕ್ರಮಗಳಿಗಾಗಿ ರೂ. 38,793 ಕೋಟಿ ಬಿಡುಗಡೆಯಾಗಿದ್ದು, ರೂ. 38,717ಕೋಟಿ ವೆಚ್ಚ ಮಾಡಿ ಶೇ.97ರಷ್ಟು ಪ್ರಗತಿ ಸಾಧಿಸಿದ್ದೇವೆ. ಕೇಂದ್ರ ಸರ್ಕಾರದಿಂದ ಬರಬೇಕಾಗಿದ್ದ ರೂ. 880 ಕೋಟಿ ಅನುದಾನ ಬಿಡುಗಡೆಯಾಗಿಲ್ಲ. ಇದನ್ನು ಬಿಡುಗಡೆ ಮಾಡಿಸಲು ಕ್ರಮ ಕೈಗೊಳ್ಳಬೇಕು.

•  ಎಸ್‌ಸಿಎಸ್‌ಪಿ/ ಟಿಎಸ್‌ಪಿ ಕಾಯ್ದೆ ಜಾರಿಗೊಂಡು 10 ವರ್ಷವಾದ ಹಿನ್ನೆಲೆಯಲ್ಲಿ ಇದರ ಅನುಷ್ಠಾನದ ಪ್ರಗತಿ ಬಗ್ಗೆ ಐಸೆಕ್ ವತಿಯಿಂದ ಮೌಲ್ಯಮಾಪನ ನಡೆಸಿದ್ದೇವೆ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಿರುವ 39 ತಾಲೂಕುಗಳನ್ನು ಗುರುತಿಸಿ ಅಧ್ಯಯನ ಕೈಗೊಳ್ಳಲಾಗಿದೆ. ಶಿಕ್ಷಣ, ಆರೋಗ್ಯ, ಜೀವನಮಟ್ಟ ಸುಧಾರಣೆ ಮತ್ತು ಬಡತನ ನಿರ್ಮೂಲನೆ ಮಾನದಂಡಗಳನ್ನು ಪರಿಗಣಿಸಿ ಸಮೀಕ್ಷೆ ನಡೆಸಲಾಗಿದೆ. ಅಭಿವೃದ್ಧಿ ಅನುದಾನ ಬಿಡುಗಡೆಯಲ್ಲಿ ಈ ಅವಧಿಯಲ್ಲಿ ಶೇ.9.6 ರಷ್ಟು ವಾರ್ಷಿಕ ಪ್ರಗತಿ ಸಾಧಿಸಲಾಗಿದೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ರಾಜ್ಯ ಕಳೆದ 10 ವರ್ಷಗಳಲ್ಲಿ ವಿವಿಧ ಮಾನದಂಡಗಳಲ್ಲಿ ಮುಂಚೂಣಿಯಲ್ಲಿರುವುದು ಸ್ಪಷ್ಟವಾಗಿದೆ.

•  ಕಾಯ್ದೆ ಪ್ರಕಾರ ಪ್ರತಿವರ್ಷ ಕನಿಷ್ಠ ಶೇ.24.1 ರಷ್ಟು ಅನುದಾನ ನೀಡಬೇಕಾಗಿದೆ. ಆದರೆ 2019-20ರ ಅವಧಿಯಲ್ಲಿ ನಿಗದಿತ ಶೇಕಡಾಕ್ಕಿಂತ ಕಡಿಮೆ ಅನುದಾನ ಬಿಡುಗಡೆ ಮಾಡಲಾಗಿದೆ. ಕಾಯ್ದೆ ಜಾರಿ ಬಳಿಕ ಒಟ್ಟು ರೂ.2.97 ಲಕ್ಷ ಕೋಟಿ ವೆಚ್ಚ ಮಾಡಲಾಗಿದೆ. ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗುತ್ತಿದೆಯೇ ಎಂಬುವುದರ ಬಗ್ಗೆ ಪರಿಶೀಲನೆ ನಡೆಸಬೇಕು.

•  ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ ಅನುದಾನದ ವಿನಿಯೋಗ, ಸಾಮಾಜಿಕ, ಆರ್ಥಿಕ ಪರಿಸ್ಥಿತಿ ಸುಧಾರಣೆ, ಜೀವನ ಮಟ್ಟ ಮತ್ತು ವಾಸಸ್ಥಳಗಳ ಅಭಿವೃದ್ಧಿಪಡಿಸುವುದು ಕಾಯ್ದೆಯ ಉದ್ದೇಶ. ಯಾವುದೇ ಕಾರಣಕ್ಕೂ ಕಾಯ್ದೆಯ ಆಶಯಕ್ಕೆ ಭಂಗ ಬರಬಾರದು. ಆಯಾ ಇಲಾಖೆಯವರು ಸಮರ್ಪಕ ಕ್ರಿಯಾ ಯೋಜನೆ ರೂಪಿಸಿ ಪರಿಶಿಷ್ಟ ಜಾತಿ/ಪಂಗಡದ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಪರಿಸ್ಥಿತಿ ಸುಧಾರಣೆಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಬೇಕು. ಅನುಷ್ಠಾನ ಇಲಾಖೆಗೆ ಬದ್ಧತೆ ಬೇಕು. ಕಳೆದ 10 ವರ್ಷಗಳಲ್ಲಿ ನಿರೀಕ್ಷಿತ ಬದಲಾವಣೆ ಸಾಧ್ಯವಾಗಿಲ್ಲ.

•  ವಿವಿಧ ಕಲ್ಯಾಣ ಯೋಜನೆಗಳಡಿ ಬ್ಯಾಂಕ್‌ಗಳು ಸಕಾಲದಲ್ಲಿ ಹಣಕಾಸು ನೆರವು ಒದಗಿಸುವುದನ್ನು ಖಾತ್ರಿಪಡಿಸಬೇಕು. ಸಾಲ ಸೌಲಭ್ಯ ಒದಗಿಸಲು ವಿಳಂಬ ಧೋರಣೆ ತೋರಿಸುವ ಬ್ಯಾಂಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರದ ಯೋಜನೆಗಳು ಶೇ.100ರಷ್ಟು ಎಸ್‌ಸಿ/ಎಸ್‌ಟಿ ಜನರಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು.

* ಈ ವರ್ಷ ರೂ. 42,017.51 ಕೋಟಿ ಹಂಚಿಕೆ ಮಾಡಿದ್ದೇವೆ. ಈ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಲು ಅದಷ್ಟು ಬೇಗನೆ ಕ್ರಿಯಾ ಯೋಜನೆ ರೂಪಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಕಾರ್ಯ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅನುದಾನ ಬಾಕಿಯುಳಿಯಬಾರದು. ಶೇ.100ರಷ್ಟು ಪ್ರಗತಿ ಸಾಧಿಸಲೇಬೇಕು. ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಾಯ್ದೆ ಪ್ರಕಾರ ಶಿಕ್ಷೆ ವಿಧಿಸುವ ಕಾರ್ಯ ಆಗಬೇಕು.

•  ದೇವದಾಸಿ ಪುನರ್‌ವಸತಿ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳುವ ಉದ್ದೇಶದಿಂದ ಸೆಪ್ಟಂಬರ್‌ ಮೊದಲ ವಾರದಿಂದ ಪುನರ್‌ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ. ದೇವದಾಸಿ ಪದ್ಧತಿಯನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು, ಯಾವುದೇ ಕಾರಣಕ್ಕೂ ದೇವದಾಸಿ ಪದ್ಧತಿ ಮುಂದುವರೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

•  ದೇವದಾಸಿ ಪದ್ಧತಿಯನ್ನು ತೊಡೆದು ಹಾಕಲು ಕಾನೂನಿಗೆ ಸೂಕ್ತ ತಿದ್ದುಪಡಿ ತರಲಾಗುವುದು. ಹೆಣ್ಣು ಮಕ್ಕಳನ್ನು ದೇವದಾಸಿ ಪದ್ಧತಿಗೆ ದೂಡುವ ಪಾಲಕರು ಸೇರಿದಂತೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು. ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದೆ ಎಂದರೆ ನಾವೆಲ್ಲರೂ ತಲೆತಗ್ಗಿಸಬೇಕಾಗಿದೆ.

* ದೇವದಾಸಿಯರೂ, ಸಫಾಯಿ ಕರ್ಮಚಾರಿಗಳು ಮುಂತಾದ ಸಮಾಜದಿಂದ ನಿರ್ಲಕ್ಷಿತ ವರ್ಗಗಳ ಜೀವನಮಟ್ಟ ಸುಧಾರಣೆಗೆ ಸರಿಯಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ಕಾರ್ಯಕ್ರಮಗಳು ಯಶಸ್ವಿಯಾಗಿ ಕಾರ್ಯರೂಪಕ್ಕೆ ಬರದೇ ಹೋದರೆ ಸಂವಿಧಾನದ ಉದ್ದೇಶಗಳನ್ನು ಈಡೇರಿಸಲು ಸಾಧ್ಯವಿಲ್ಲ

* ಕರ್ನಾಟಕದ ಇತಿಹಾಸದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಯೋಜನೆಗಳಿಗೆ ರೂಪಾಯಿ 2.97 ಲಕ್ಷ ಕೋಟಿಯಷ್ಟು ಹಣ ಈವರೆಗೆ ಖರ್ಚು ಮಾಡಲಾಗಿದೆ.

* ಇಷ್ಟೆಲ್ಲಾ ಖರ್ಚು ಮಾಡಿಯೂ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಜೀವನಮಟ್ಟ ಸುಧಾರಣೆ ಆಗದಿದ್ದರೆ ನಾಚಿಕೆಗೇಡು.

•  ಕಳೆದ ಸಾಲಿನಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ವಸತಿ ಯೋಜನೆಗಳಿಗೆ ರೂ.1,086 ಕೋಟಿ ಬಿಡುಗಡೆ ಮಾಡಲಾಗಿದೆ. ಪ್ರತಿಯೊಬ್ಬ ಅರ್ಹ ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಬೇಕು.

10 have the highest government jobs in the state: Justice Nagamohan Das' report BIG NEWS: Out of 101 castes
Share. Facebook Twitter LinkedIn WhatsApp Email

Related Posts

ರಾಜ್ಯದ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇನ್ಮುಂದೆ  ಆಸ್ತಿ ನೋಂದಣಿಗೆ `ಡಿಜಿಟಲ್ ಸಹಿ’ ಕಡ್ಡಾಯ.!

17/08/2025 7:02 AM1 Min Read

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಗಣೇಶ ಹಬ್ಬಕ್ಕೆ ಮುನ್ನ ‘ಗೃಹಲಕ್ಷ್ಮಿ’ ಬಾಕಿ ಹಣ ಬಿಡುಗಡೆ.!

17/08/2025 6:57 AM1 Min Read

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 8 ಗಂಟೆಯಿಂದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

17/08/2025 6:47 AM3 Mins Read
Recent News

ಗರ್ಭಾವಸ್ಥೆಯಲ್ಲಿ ಪ್ಯಾರಸಿಟಮಾಲ್: ಶಿಶುಗಳಲ್ಲಿ ಆಟಿಸಂ, ಎಡಿಎಚ್ಡಿ ಅಪಾಯದ ಬಗ್ಗೆ ಎಚ್ಚರಿಸಿದ ಸಂಶೋಧಕರು

17/08/2025 7:14 AM

WhatsApp ಬಳಕೆದಾರರಿಗೆ ಮಹತ್ವದ ಮಾಹಿತಿ: ಒಂದು ವೀಡಿಯೊ ಕರೆ ನಿಮ್ಮ ಬ್ಯಾಂಕ್ ಖಾತೆಯನ್ನು ಖಾಲಿ ಮಾಡಬಹುದು..!

17/08/2025 7:05 AM

ರಾಜ್ಯದ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇನ್ಮುಂದೆ  ಆಸ್ತಿ ನೋಂದಣಿಗೆ `ಡಿಜಿಟಲ್ ಸಹಿ’ ಕಡ್ಡಾಯ.!

17/08/2025 7:02 AM

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಗಣೇಶ ಹಬ್ಬಕ್ಕೆ ಮುನ್ನ ‘ಗೃಹಲಕ್ಷ್ಮಿ’ ಬಾಕಿ ಹಣ ಬಿಡುಗಡೆ.!

17/08/2025 6:57 AM
State News
KARNATAKA

ರಾಜ್ಯದ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಇನ್ಮುಂದೆ  ಆಸ್ತಿ ನೋಂದಣಿಗೆ `ಡಿಜಿಟಲ್ ಸಹಿ’ ಕಡ್ಡಾಯ.!

By kannadanewsnow5717/08/2025 7:02 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಆಸ್ತಿ, ಖರೀದಿ ಮಾರಾಟಗಾರರಿಗೆ ಸಿಹಿಸುದ್ದಿ ಸಿಕ್ಕಿದ್ದು, ಇನ್ಮುಂದೆ ಆಸ್ತಿ ನೋಂದಣಿಗೆ ಡಿಜಿಟಲ್ ಸಹಿ ಕಡ್ಡಾಯ ಮಾಡಲಾಗಿದೆ.…

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಗಣೇಶ ಹಬ್ಬಕ್ಕೆ ಮುನ್ನ ‘ಗೃಹಲಕ್ಷ್ಮಿ’ ಬಾಕಿ ಹಣ ಬಿಡುಗಡೆ.!

17/08/2025 6:57 AM

ಬೆಂಗಳೂರಿಗರೇ ಗಮನಿಸಿ : ಇಂದು ಬೆಳಗ್ಗೆ 8 ಗಂಟೆಯಿಂದ ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | POWER CUT

17/08/2025 6:47 AM

ಕರ್ನಾಟಕದಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ ನಿಂದ ‘ಗಣಪತಿ’ ಬ್ಯಾನ್‌..!

17/08/2025 6:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.