ಬೆಂಗಳೂರು : ವಿವಿಧ ತಾಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ,ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಬಿಡುಗಡೆಗೊಳಿಸಿರುವ ಬಗ್ಗೆ ಆರ್ಥಿಕ ಇಲಾಖೆಯಿಂದ ಹೊರಡಿಸಿರುವ ಆದೇಶ.
ವಿವಿಧ ತಾಲ್ಲೂಕು ಪಂಚಾಯಿತಿಗಳ ಹಾಗೂ ಅವುಗಳ ವ್ಯಾಪ್ತಿಯ ಇಲಾಖೆಗಳಲ್ಲಿ ಬಾಕಿ/ಪ್ರಸಕ್ತ ಸಾಲಿನ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಹೆಚ್ಚುವರಿ ಅನುದಾನವನ್ನು ಪ್ರಧಾನ ಲೆಕ್ಕ ಶೀರ್ಷಿಕೆ 2202, 2210, 2225, 2401, 2403, 2435 ಮತ್ತು 2515ರಡಿ ಬಿಡುಗಡೆಗೊಳಿಸಲು ಪ್ರಸ್ತಾಪಿಸಿದೆ.
ಪ್ರಸ್ತಾವನೆಯನ್ನು ಪರಿಶೀಲಿಸಿ, ತಾಲ್ಲೂಕು ಪಂಚಾಯತ್ ಕಾರ್ಯಕ್ರಮದಡಿ ರೂ.2819.45ಲಕ್ಷಗಳನ್ನು ಲೆಕ್ಕ ಶೀರ್ಷಿಕ 2515-00-197-1-10-300ರಿಂದ ಬಿಡುಗಡೆಗೊಳಿಸಲು ನಿರ್ಣಯಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 2ರ ತಾಲ್ಲೂಕು ಪಂಚಾಯತಿಗೆ ಕಾಲಂ 3 ಕಾರ್ಯಕ್ರಮದಡಿ ಬಾಕಿ/ಪ್ರಸಕ್ತ ಸಾಲಿನ ವೇತನ, ವೇತನೇತರ, ಹೊರಗುತ್ತಿಗೆ ನೌಕರರ ವೇತನ, ದಿನಗೂಲಿ ನೌಕರರ ಉಪದಾನ ಮತ್ತು ವೈದ್ಯಕೀಯ ವೆಚ್ಚ ಮರುಪಾವತಿಗಾಗಿ ಅಗತ್ಯವಿರುವ ಅನುದಾನವನ್ನು ಕಾಲಂ 4ರ ಲೆಕ್ಕ ಶೀರ್ಷಿಕೆಯಡಿ ರೂ.2819.45ಲಕ್ಷ (ರೂಪಾಯಿ ಎರಡು ಸಾವಿರದ ಎಂಟು ನೂರ ಹತ್ತೊಂಬತ್ತು ಲಕ್ಷದ ನಲವತ್ತೈದು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ.