Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

15/03/2026 7:47 PM

2026ರ ವಿಧಾನಸಭಾ ಚುನಾವಣೆ: ಮಾದರಿ ಚುನಾವಣಾ ನೀತಿ ಸಂಹಿತೆ ಅಂದ್ರೆ ಏನು? ಇಲ್ಲಿದೆ ಮಾಹಿತಿ

15/03/2026 7:30 PM

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

15/03/2026 7:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಪಂಚ ಗ್ಯಾರಂಟಿ’ಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48-60 ಸಾವಿರ ರೂ.ಸೌಲಭ್ಯ : CM ಸಿದ್ದರಾಮಯ್ಯ ಮಾಹಿತಿ
KARNATAKA

BIG NEWS : `ಪಂಚ ಗ್ಯಾರಂಟಿ’ಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48-60 ಸಾವಿರ ರೂ.ಸೌಲಭ್ಯ : CM ಸಿದ್ದರಾಮಯ್ಯ ಮಾಹಿತಿ

By kannadanewsnow5717/09/2024 10:18 AM

ಕಲಬುರಗಿ : ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48 ರಿಂದ 60 ಸಾವಿರ ರೂ. ಸೌಲಭ್ಯ ಲಭಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48 ರಿಂದ 60 ಸಾವಿರ ರೂ. ಸೌಲಭ್ಯ ಲಭಿಸಲಿದೆ ಜಾತಿ-ಧರ್ಮ ಇಲ್ಲದೆ ಪ್ರತಿಯೊಬ್ಬರನ್ನು ಆರ್ಥಿಕವಾಗಿ ಸುಸ್ಥಿರವಾಗಿರಿಸಲು ಹಾಕಿಕೊಂಡಿರುವ ಈ ಯೋಜನೆಗಳು ಬಡವರ ಬದುಕನ್ನೆ ಬದಲಿಸುವ ಕರ್ನಾಟಕ ಮಾದರಿ ಆಡಳಿತದ ಗ್ಯಾರಂಟಿ ಯೋಜನೆಗಳಾಗಿ ಪರಿವರ್ತನೆಗೊಂಡಿರುವುದಕ್ಕೆ ಸಂತೃಪ್ತಿ ಭಾವ ನನ್ನಲ್ಲಿ ಮೂಡಿದೆ.

ಶಕ್ತಿ” ಯೋಜನೆಯಡಿ ಪ್ರತಿ ದಿನ 50 ರಿಂದ 60 ಲಕ್ಷ ಜನ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆಯುತ್ತಿದ್ದು, ವಾರ್ಷಿಕವಾಗಿ ಸರ್ಕಾರವು ಇದಕ್ಕಾಗಿ 4,000 ಕೋಟಿ ರೂ. ವೆಚ್ಚ ಮಾಡಲಿದೆ. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಆಗಸ್ಟ್-2024ರ ಅಂತ್ಯಕ್ಕೆ ದಿನನಿತ್ಯ 17.11 ಲಕ್ಷದಂತೆ 41.45 ಕೋಟಿ ಟ್ರಿಪ್‍ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣದ ಸೌಲಭ್ಯ ಪಡೆದಿದ್ದಾರೆ. ಇದರ ವೆಚ್ಚ 1,387 ಕೋಟಿ ರೂ. ಗಳನ್ನು ನಮ್ಮ ಸರ್ಕಾರ ಭರಿಸುತ್ತಿದೆ.

“ಅನ್ನ ಭಾಗ್ಯ” ಯೋಜನೆಯಡಿ 10 ಕೆ.ಜಿ. ಆಹಾರ ಧಾನ್ಯ ನೀಡಲಾಗುತ್ತಿದೆ. ಇದರಲ್ಲಿ 5 ಕೆ.ಜಿ ಅಕ್ಕಿಯ ಬದಲು ಪ್ರತಿ ಕೆ.ಜಿ.ಗೆ 34 ರೂ. ಗಳಂತೆ ತಲಾ ಸದಸ್ಯರಿಗೆ 170 ರೂ. ಗಳನ್ನು ಡಿ.ಬಿ.ಟಿ. ಮೂಲಕ ಹಣ ಪಾವತಿಸಲಾಗುತ್ತಿದೆ. ಪ್ರದೇಶದ 7 ಜಿಲ್ಲೆಗಳಲ್ಲಿ ಕಳೆದ ಜೂನ್-2024 ಮಾಹೆಗೆ ಒಟ್ಟು 22.59 ಲಕ್ಷ ಪಡಿತರ ಚೀಟಿಯ ಕುಟುಂಬದ ಸದಸ್ಯರಿಗೆ 1,551 ಕೋಟಿ ರೂ. ಹಣ ಪಾವತಿಸಿದೆ.

200 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ “ಗೃಹ ಜ್ಯೋತಿ” ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದ ಜೆಸ್ಕಾಂ ವ್ಯಾಪ್ತಿಯಲ್ಲಿ 21.88 ಲಕ್ಷ ಗ್ರಾಹಕರು ನೋಂದಣಿ ಮಾಡಿಕೊಂಡು ಯೋಜನೆಯ ಲಾಭ ಪಡೆದಿದ್ದಾರೆ. ಇದಕ್ಕಾಗಿ ಸರ್ಕಾರ 1,104 ಕೋಟಿ ರೂ. ಜೆಸ್ಕಾಂಗೆ ಸಬ್ಸಿಡಿ ಪಾವತಿಸಿದೆ.

ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ಒದಗಿಸುವ “ಗೃಹ ಲಕ್ಷ್ಮಿ” ಯೋಜನೆಯಡಿ ಕಲಬುರಗಿ ವಿಭಾಗದ 7 ಜಿಲ್ಲೆಗಳಲ್ಲಿ ಇದುವರೆಗೆ 24.53 ಲಕ್ಷ ಮಹಿಳೆಯರಿಗೆ ತಲಾ 2,000 ರೂ. ಗಳಂತೆ 5000 ಕೋಟಿ ರೂ. ಗಳನ್ನು ಡಿ.ಬಿ.ಟಿ. ಮೂಲಕ ಪಾವತಿಸಿದೆ. ಇದರಿಂದ ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದಂತಾಗಿದೆ.

2022-23ನೇ ಶೈಕ್ಷಣಿಕ ಸಾಲಿನಲ್ಲಿ ಡಿಪ್ಲೋಮಾ ಮತ್ತು ಪದವಿ ಉತ್ತೀರ್ಣರಾದ ನಿರುದ್ಯೋಗಿಗಳಿಗೆ ಕ್ರಮವಾಗಿ ಮಾಸಿಕ 1,500 ಮತ್ತು 3,000 ಭತ್ಯೆ ನೀಡುವ “ಯುವ ನಿಧಿ” ಯೋಜನೆಯಡಿ ಇದೂವರೆಗೆ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 49,691 ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದು, ಇದರಲ್ಲಿ ಅರ್ಹ 22,272 ನಿರುದ್ಯೋಗಿಗಳಿಗೆ 28.39 ಕೋಟಿ ರೂ.ಗಳನ್ನು ಡಿ.ಬಿ.ಟಿ. ಮೂಲಕ ಹಣ ಪಾವತಿಸಲಾಗಿದೆ ಎಂದು ತಿಳಿಸಿದ್ದಾರೆ.

000 per family annually in the state: CM Siddaramaiah 000-60 BIG NEWS : `ಪಂಚ ಗ್ಯಾರಂಟಿ' ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 48-60 ಸಾವಿರ ರೂ.ಸೌಲಭ್ಯ : CM ಸಿದ್ದರಾಮಯ್ಯ ಮಾಹಿತಿ BIG NEWS: 'Pancha Guarantee' schemes will provide Rs 48
Share. Facebook Twitter LinkedIn WhatsApp Email

Related Posts

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

15/03/2026 7:47 PM3 Mins Read

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

15/03/2026 7:01 PM1 Min Read

ಕೋಲಾರದ ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ದಾಳಿ: ಅಕ್ರಮವಾಗಿ ಬಳಸುತ್ತಿದ್ದ 21 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ!

15/03/2026 6:20 PM1 Min Read
Recent News

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

15/03/2026 7:47 PM

2026ರ ವಿಧಾನಸಭಾ ಚುನಾವಣೆ: ಮಾದರಿ ಚುನಾವಣಾ ನೀತಿ ಸಂಹಿತೆ ಅಂದ್ರೆ ಏನು? ಇಲ್ಲಿದೆ ಮಾಹಿತಿ

15/03/2026 7:30 PM

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

15/03/2026 7:01 PM

ಕೋಲಾರದ ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ದಾಳಿ: ಅಕ್ರಮವಾಗಿ ಬಳಸುತ್ತಿದ್ದ 21 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ!

15/03/2026 6:20 PM
State News
KARNATAKA

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

By kannadanewsnow0915/03/2026 7:47 PM KARNATAKA 3 Mins Read

ಹಾವೇರಿ:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ವರ್ಷದಲ್ಲಿ ಮೂರು ಪಟ್ಟು ಸಾಲ ಮಾಡಿದ್ದಾರೆ. ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ…

ಮದ್ದೂರಮ್ಮ ಜನರ ದುಃಖವನ್ನ ದೂರಮಾಡಲಿ, ಶಕ್ತಿ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಾರ್ಥನೆ

15/03/2026 7:01 PM

ಕೋಲಾರದ ಹೋಟೆಲ್‌ಗಳ ಮೇಲೆ ತಹಸೀಲ್ದಾರ್ ದಾಳಿ: ಅಕ್ರಮವಾಗಿ ಬಳಸುತ್ತಿದ್ದ 21 ಗೃಹಬಳಕೆ ಸಿಲಿಂಡರ್‌ಗಳ ಜಪ್ತಿ!

15/03/2026 6:20 PM

ಬೆಂಗಳೂರಿನಲ್ಲಿ ಗ್ಯಾಸ್ ಅಭಾವ: ಹೋಟೆಲ್ ಉದ್ಯಮಕ್ಕೆ 100 ಕೋಟಿ ರೂಪಾಯಿ ನಷ್ಟದ ಭೀತಿ!

15/03/2026 6:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.