ಬೆಂಗಳೂರು : ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್‌ಟಿ ಸೋಮಶೇಖರ್ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದರು.
ಬೆಂಗಳೂರಲ್ಲಿ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಅಡಿ ಇಬ್ಬರನ್ನು ಉಚ್ಚಾಟನೆ ಮಾಡಲಾಗಿದೆ. ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿ ಈ ಒಂದು ನಿರ್ಧಾರ ಕೈಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆಯ ಬಗ್ಗೆ ಅವರಿಗೂ ಸಹ ಗೊತ್ತಿದೆ. 6 ವರ್ಷಗಳ ಕಾಲ ಇಬ್ಬರನ್ನು ಉಚ್ಚಾಟನೆ ಮಾಡಲಾಗಿದೆ. ಶಿಸ್ತುಕ್ರಮ ಆಗಬೇಕು ಅಂತ ನಮ್ಮ ಅಭಿಪ್ರಾಯ ತಿಳಿಸಿದ್ದೆವು ಹಾಗಾಗಿ ಇದೀಗ ಇಬ್ಬರನ್ನು ಕೇಂದ್ರೀಯ ಶಿಸ್ತು ಸಮಿತಿ ಉಚ್ಚಾಟನೆ ಮಾಡಿದೆ.
ಶಿವರಾಂ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರ ಉಚ್ಚಾಟನೆ ಸ್ವಾಗತಿಸುತ್ತೇನೆ. ಬಿಜೆಪಿ ಅಧಿಕಾರಕ್ಕೆ ಬಂದಾಗ ಇಬ್ಬರಿಗೂ ಕೂಡ ಅವಕಾಶ ಸಿಕ್ಕಿತ್ತು. ಆದರೆ ವಿಪಕ್ಷದಲ್ಲಿ ಕೂಡಲು ಹೆಬ್ಬಾರ್ ಮತ್ತು ಸೋಮಶೇಖರ್ ಗೆ ಕಷ್ಟ ಆಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈವ ವಿಜಯೇಂದ್ರ ಹೇಳಿಕೆ ನೀಡಿದರು.