ಚಿಕ್ಕಮಗಳೂರು : ರೋಗಿಗಳು ಆಸ್ಪತ್ರೆಗೆ ಬಂದರೆ ವೈದ್ಯರು ತಕ್ಷಣ ಅವರನ್ನು ಪರಿಶೀಲಿಸಿ ಚಿಕಿತ್ಸೆ ಕೊಡಿಸಿ ಪ್ರಾಣ ಉಳಿಸುವ ಕೆಲಸ ಮಾಡಬೇಕು. ಆದರೆ ಇಲ್ಲಿ ಒಬ್ಬ ವೈದ್ಯ ರೋಗಿ ಬಂದು ಆಸ್ಪತ್ರೆಯಲ್ಲಿ ನರಳಾಡುತ್ತಿದ್ದರು ಕೂಡ ನಿರ್ಲಕ್ಷ ವಹಿಸಿದ್ದು, ವೈದ್ಯ ಮತ್ತು ಸಿಬ್ಬಂದಿಗಳ ನಿರ್ಲಕ್ಷಕ್ಕೆ 60 ವರ್ಷದ ವೃದ್ಧ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ.
ಹೌದು ವೈದ್ಯ ಮತ್ತು ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ರೋಗಿ ಬಲಿಯಾಗಿದ್ದಾರೆ. ರೋಗಿಯು ನೋವಿನಿಂದ ನರಳಾಡುತ್ತಿದ್ದರೆ, ಮತ್ತೊಂದೆಡೆ ಫೋನಲ್ಲಿ ವೈದ್ಯ ಬಿಜಿಯಾಗಿದ್ದಾನೆ. ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಕರ್ಮಕಾಂಡ ಬಯಲಾಗಿದೆ. 60 ವರ್ಷದ ಮಂಜುನಾಥ್ ಇದೀಗ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಈ ಒಂದು ಘಟನೆ ನಡೆದಿದೆ.








