ಬೆಂಗಳೂರು : ರಾಜ್ಯದಲ್ಲಿ ತಾಪಮಾನ ಕುಸಿತವಾಗಿದ್ದು, ಮೈನಡುಗುವ ಚಳಿಗೆ ಜನರು ತತ್ತರಿಸಿದ್ದಾರೆ. ಈ ನಡುವೆ ಇನ್ನೂ 2 ದಿನ ಶೀತಗಾಳಿ ಎಚ್ಚರಿಕೆ ನೀಡಲಾಗಿದೆ.
ಹೌದು,ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಶೀತ ಅಲೆ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಿಗೆ ಶೀತ ಅಲೆಯು ತೀವ್ರವಾಗಿರುವ ಲಕ್ಷಣ ಕಂಡು ಬಂದಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.
ಬಾಗಲಕೋಟೆ, ಬೆಳಗಾವಿ, ಧಾರಾವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ಶೀತ ಅಲೆ ಇರಲಿದ್ದು, ಹೀಗಾಗಿ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.








