ಬೆಂಗಳೂರು : ಭಾರೀ ಮಳೆಯಿಂದಾಗಿ ತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಾಮಾನ ಕುಸಿತವಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಚಳಿ ಹೆಚ್ಚಳವಾಗಿದೆ.
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನಗಳ ಕಾಲ ಶೀತಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಶೀತಗಾಳಿ ಬೀಸಲಿದೆ. ಉತ್ತರ ಕರ್ನಾಟಕ ಭಾಗದ ಒಂದೆರೆಡುಕಡೆಗಳಲ್ಲಿ ದಟ್ಟವಾದ ಮಂಜು ಆವರಿಸಲುದೆ. ದಕ್ಷಿಣ ಒಳನಾಡಿನಲ್ಲಿಯೂ ಮಂಜು ಕವಿದ ವಾತಾವರಣವಿರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ವಿಜಯಪುರದಲ್ಲಿ ಗರಿಷ್ಠ 30 ಹಾಗೂ ಕನಿಷ್ಠ 16, ಕಲಬುರಗಿ ಗರಿಷ್ಠ 31 ಹಾಗೂ ಕನಿಷ್ಠ 14 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಶಿವಮೊಗ್ಗದಲ್ಲಿ ಗರಿಷ್ಠ 28, ಕನಿಷ್ಠ 15, ಮೈಸೂರು ಗರಿಷ್ಥ 28 ಕನಿಷ್ಠ 16, ಬೆಳಗಾವಿ ಗರಿಷ್ಠ29, ಕನಿಷ್ಠ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಮಂಡ್ಯ, ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್, ಕಲಬುರಗಿ, ಬೆಳಗಾವಿ, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಕಡೆ ತೇವಾಂಶ ಹೆಚ್ಚಿರುವುದರಿಂದ ಚಳಿ ಹೆಚ್ಚಾಗಿದೆ.