Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಕರ್ನಾಟಕದ ಸುದೀರ್ಘ ಅವಧಿಯ `CM’ ಆಗಲು ಜನರ ಆಶೀರ್ವಾದವೇ ಕಾರಣ : ಸಿಎಂ ಸಿದ್ದರಾಮಯ್ಯ
KARNATAKA

BIG NEWS: ಕರ್ನಾಟಕದ ಸುದೀರ್ಘ ಅವಧಿಯ `CM’ ಆಗಲು ಜನರ ಆಶೀರ್ವಾದವೇ ಕಾರಣ : ಸಿಎಂ ಸಿದ್ದರಾಮಯ್ಯ

By kannadanewsnow57

ಮೈಸೂರು : ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ. ಅರಸುರವರು ಮೈಸೂರಿನವರೇ ಆಗಿರುವುದು ಸಂತೋಷದ ಸಂಗತಿ. ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 8ಕ್ಕೂ ಹೆಚ್ಚು ಬಾರಿ ಗೆಲುವು ಸಾಧಿಸಿದ್ದೇನೆ.

ಕಡಿಮೆ ಜನಸಂಖ್ಯೆಯ ಅರಸು ಸಮುದಾಯದವರಾಗಿದ್ದ ದೇವರಾಜ ಅರಸು ಅವರು ಜನಪ್ರಿಯ ನಾಯಕರಾಗಿದ್ದರು. ಅಂತಹ ಮಹಾನ್ ನಾಯಕನಿಗೂ ಮತ್ತು ನನಗೂ ಹೋಲಿಕೆ ಸರಿಯಲ್ಲ. ಅರಸು ಅವರ ಅವಧಿಯಲ್ಲಿ ರಾಜ್ಯದ ಪರಿಸ್ಥಿತಿ ವಿಭಿನ್ನವಾಗಿತ್ತು. ಅವರು ಒಂದು ಬಾರಿ ಅವಿರೋಧವಾಗಿಯೂ ಆಯ್ಕೆಯಾಗಿದ್ದರು.

ದಾಖಲೆಗಳು ಮುರಿಯಲೆಂದೇ ನಿರ್ಮಾಣವಾಗುತ್ತವೆ. ಪ್ರಸ್ತುತ ನಾನು ಪೂರೈಸಲಿರುವ ಅವಧಿಯನ್ನು ಮೀರಲಿರುವ ಮತ್ತೊಬ್ಬ ನಾಯಕರೂ ಮುಂದೆ ಬರಬಹುದು. ನನಗಿಂತ ಹೆಚ್ಚಿನ ಬಾರಿ ಬಜೆಟ್ ಮಂಡಿಸುವ ನಾಯಕರೂ ಮುಂದೆ ಬರಬಹುದು.

ಬಜೆಟ್ ತಯಾರಿಯನ್ನು ಸಂಕ್ರಾಂತಿಯ ನಂತರ ಪ್ರಾರಂಭಿಸಲಾಗುವುದು. ಸಂಪುಟ ಪುನರ್ರಚನೆಯ ಬಗ್ಗೆ ಕಾಂಗ್ರೆಸ್ ವರಿಷ್ಠರಾದ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸುತ್ತೇನೆ.

ರಾಜ್ಯಕ್ಕೆ ಜಿಎಸ್ಟಿ ಯಿಂದ ವಾರ್ಷಿಕವಾಗಿ 12 ರಿಂದ 15 ಸಾವಿರ ಕೋಟಿ ರೂ.ಗಳು ನಷ್ಟವಾಗುತ್ತಿದ್ದು, ಇದು ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕಾಲದಿಂದಲೂ ಮನರೇಗಾ ಯೋಜನೆಗೆ ಸಂಪೂರ್ಣವಾಗಿ ಕೇಂದ್ರವೇ ಅನುದಾನ ನೀಡುತ್ತಿತ್ತು. ಆದರೆ ಈಗ ಈ ಯೋಜನೆಯನ್ನು ರದ್ದುಪಡಿಸಿದ್ದು, ಇದರಿಂದ ಕಾರ್ಮಿಕರು, ಸಣ್ಣ ರೈತರು, ಬಡ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಬಡವರಿಗೆ ನೀಡಲಾಗುತ್ತಿದ್ದ ಕೆಲಸದ ದಿನಗಳು ಕಡಿಮೆಯಾಗಲಿದೆ. ಈ ಮೂಲಕ ಜನರ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ. ಇದು ಅಸಂವಿಧಾನಿಕ ಕ್ರಮ. ಈ ಕಾಯ್ದೆಯಂತೆ ಕಾಮಗಾರಿಗಳಿಗೆ ಕೇಂದ್ರ ಮತ್ತು ರಾಜ್ಯ 60:40 ರಷ್ಟು ಅನುದಾನವನ್ನು ನೀಡಬೇಕಾಗಿದೆ. ಇದರಿಂದ ರಾಜ್ಯ ಸರ್ಕಾರದ ಮೇಲೆ ಸುಮಾರು 3,000 ಕೋಟಿ ರೂ.ಗಳ ಹೊರೆ ಬೀಳಲಿದೆ.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಹುಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ನಾಳೆ ಅರಣ್ಯ ಇಲಾಖೆಯೊಂದಿಗೆ ಸಭೆ ನಿಗದಿಯಾಗಿದೆ. ರಾಜ್ಯದಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದ್ದು, ಅರಣ್ಯಗಳಿಂದ ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಹುಲಿಯನ್ನು ಸೆರೆಹಿಡಿಯಲು ಸಿಬ್ಬಂದಿಗೆ ಸೂಚನೆ ನೀಡಲಾಗಿದ್ದು, ಸೆರೆಹಿಡಿದ ಹುಲಿಗಳನ್ನು ಮತ್ತೊಂದು ಅರಣ್ಯ ಪ್ರದೇಶಕ್ಕೆ ವರ್ಗಾಯಿಸಲು ಸೂಚಿಸಲಾಗಿದೆ.

ಮೈಸೂರಿನ ಅರಮನೆಯ ಮುಂಭಾಗದಲ್ಲಿ ಹೀಲಿಯಂ ಸಿಲಿಂಡರ್ ಸ್ಪೋಟದಲ್ಲಿ ಮೃತರಾದ ಮಹಿಳೆಯರಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡಲಾಗುವುದು ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ್ ಅರಸು ಅವರು ಸುದೀರ್ಘ ಅವಧಿಗೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ದಾಖಲೆ ಸರಿಗಟ್ಟಲು ಜನರ ಆಶೀರ್ವಾದವೇ ಕಾರಣ.

ತಾಲ್ಲೂಕು ಬೋರ್ಡ್ ಸದಸ್ಯನಾದ ನಂತರದ ನನ್ನ ರಾಜಕೀಯ ಜೀವನದಲ್ಲಿ ಸಚಿವನಾಗುವ ಮತ್ತು ಮುಖ್ಯಮಂತ್ರಿಯಾಗುವ ನಿರೀಕ್ಷೆಯಿರಲಿಲ್ಲ. 13 ಚುನಾವಣೆಗಳನ್ನೂ ಎದುರಿಸಿ 9 ಬಾರಿ ಗೆಲುವು… pic.twitter.com/goutsnUIV5

— Siddaramaiah (@siddaramaiah) January 5, 2026

BIG NEWS: People's blessings are the reason for becoming the longest-serving `CM' of Karnataka: CM Siddaramaiah
Share. Facebook Twitter LinkedIn WhatsApp Email

Related Posts

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

2 Mins Read

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

2 Mins Read

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

2 Mins Read
Recent News

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

State News
KARNATAKA

ಪ್ರಧಾನಿ ಮೋದಿಯವರ 12 ವರ್ಷದ ಆಡಳಿತದಲ್ಲಿ ದೇಶದ ಸರ್ವಾಂಗೀಣ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಕೇಂದ್ರ ಸರ್ಕಾರದ ಸಾಲು ಸಾಲು ಅಭಿವೃದ್ಧಿ ಕೆಲಸಗಳು ಜನರನ್ನು ತಲುಪಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಹನ್ನೆರಡು ವರ್ಷಗಳ…

ಸಾಗರದ ಉಳ್ಳೂರು-ತ್ಯಾಗರ್ತಿ ವಿದ್ಯುತ್ ಲೈನ್ ಕಾಮಗಾರಿ ತ್ವರಿತವಾಗಿ ಮುಗಿಸಿ: MP ಬಿವೈ ರಾಘವೇಂದ್ರಗೆ ಗ್ರಾಮಸ್ಥರ ಮನವಿ

ಪ್ರಧಾನಿ ಮೋದಿ ಸಾಧನೆ ಅನನ್ಯ, ಶಿವಮೊಗ್ಗ ಜಿಲ್ಲೆಗೆ ರೈಲ್ವೆ ಅಭಿವೃದ್ಧಿಗೆ ಸಿಂಹಪಾಲು: ಸಂಸದ ಬಿ.ವೈ.ರಾಘವೇಂದ್ರ

ಸಾಗರದ ಮಾರಿಕಾಂಬೆ ಸನ್ನಿಧಿಗೆ ಮಂಗಳೂರು ಡಿಆರ್ ರಮೇಶ್ ಭೇಟಿ, ವಿಶೇಷ ಪೂಜೆ ಸಲ್ಲಿಕೆ: ಪ್ರತಿಷ್ಠಾನದಿಂದ ಸನ್ಮಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.