ಧಾರವಾಡ : ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರಕ್ಕೆ ಸಂಬಂಧಪಟ್ಟಂತೆ ಸರ್ಕಾರದ ಆದೇಶಕ್ಕೆ ತಡೆಯಾಜ್ಞೆ ತೆರವು ಕೊರಿದ್ದ ಅರ್ಜಿಯ ತೀರ್ಪು ಇಂದು ಹೊರಬೀಳಲಿದೆ. ಧಾರವಾಡ ಹೈಕೋರ್ಟಿನಿಂದ ಇಂದು ತೀರ್ಪು ಹೊರಬೀಳಲಿದೆ. ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು.
ಅಕ್ಟೋಬರ್ 28ರಂದು ಹೈಕೋರ್ಟ್ ಏಕ ಸದಸ್ಯ ಪೀಠ ತಡೆಯಾಜ್ಞೆ ನೀಡಿತ್ತು. ತಡೆಯಾಜ್ಞೆಯನ್ನು ಪ್ರಶ್ನಿಸಿ ರಾಜ್ಯ ಸರ್ಕಾರದ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ನವೆಂಬರ್ 4ರಂದು ನಡೆದಿದ್ದ ಅರ್ಜಿಯ ವಿಚಾರಣೆ ವಾದ ಪ್ರತಿವಾದ ಆಲಿಸಿ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು ಇಂದು ಹೈಕೋರ್ಟ್ ದ್ವಿಸದಸ್ಯ ಪೀಠ ತೀರ್ಪು ಪ್ರಕಟಿಸಲಿದೆ.a








