Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ | WATCH VIDEO

ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

Breaking News: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ‘ದಳಪತಿ ವಿಜಯ್’ ಅಧಿಕಾರ ಸ್ವೀಕಾರ !

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪ್ರಧಾನಿ ಮೋದಿ ಒಬ್ಬರೇ ತಮ್ಮ ಅವಧಿಯಲ್ಲಿ 135 ಲಕ್ಷ ಕೋಟಿ ರೂ. ಸಾಲ ಮಾಡಿಟ್ಟಿದ್ದಾರೆ : CM ಸಿದ್ದರಾಮಯ್ಯ ಆರೋಪ!
KARNATAKA

BIG NEWS : ಪ್ರಧಾನಿ ಮೋದಿ ಒಬ್ಬರೇ ತಮ್ಮ ಅವಧಿಯಲ್ಲಿ 135 ಲಕ್ಷ ಕೋಟಿ ರೂ. ಸಾಲ ಮಾಡಿಟ್ಟಿದ್ದಾರೆ : CM ಸಿದ್ದರಾಮಯ್ಯ ಆರೋಪ!

By kannadanewsnow57

ಬಳ್ಳಾರಿ : ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ನಮ್ಮ ನಿಮ್ಮ ಬದುಕಿನ ಸಮಸ್ಯೆಗಳ ಬಗ್ಗೆ ಯಾವತ್ತೂ ಮಾತನಾಡಿಲ್ಲ. ಜಾತಿ-ಧರ್ಮದ ಹೆಸರಿನಲ್ಲಿ ಭಾರತೀಯರನ್ನು ಪರಸ್ಪರ ಕಚ್ಚಾಡಿಸಿ, ವಿಭಜನೆ ಮೂಲಕ ರಾಜಕಾರಣ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸಂಡೂರಿನ ವಡ್ಡು ಗ್ರಾಮದಲ್ಲಿ ನಡೆದ ಬೃಹತ್ ಜನಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರು ಭಾರತೀಯರ ಮನಸ್ಸು-ಹೃದಯಗಳನ್ನು ಬೆಸೆಯುವ “ಭಾರತ್ ಜೋಡೋ” ಚಳವಳಿಯನ್ನು ಮುನ್ನಡೆಸಿದ್ದಾರೆ. ರೈತರ ಬದುಕನ್ನು ಮಾರಣ ಹೋಮ ಮಾಡುವ ಕರಾಳ ಕಾಯ್ದೆಗಳನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿತು. ದೇಶಾದ್ಯಂತ ರೈತರು ನಡೆಸಿದ ವಿರೋಚಿತ ಹೋರಾಟಕ್ಕೆ ಶರಣಾಗಿ ಮೋದಿ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಿತು. ರೈತರ ಬದುಕಿಗೆ ಕರಾಳತೆ ಸೃಷ್ಟಿಸಿದ ಪ್ರಧಾನಿ ಮೋದಿ ಅವರ ಸರ್ಕಾರ ಮತ್ತೊಂದು ಕಡೆ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಾ, ಇಡೀ ದೇಶದ ಶ್ರಮಿಕ ಮತ್ತು ದುಡಿಯುವ ವರ್ಗಗಳ ಬದುಕಿನ ಅವಕಾಶಗಳನ್ನು ಹೊಸಕಿ ಹಾಕುವ ಹುನ್ನಾರವನ್ನೂ ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸಂಸದ ಅನಂತ ಕುಮಾರ ಹೆಗ್ಡೆ ಅವರು ಬಿಜೆಪಿ ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲಿಕ್ಕೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಪ್ರಧಾನಿ ಮೋದಿ ಅವರು ಅಲ್ಲಗಳೆಯಲಿಲ್ಲ. 1947 ರಿಂದ 2014 ರವರೆಗೂ ಭಾರತ ದೇಶದ ಸಾಲ ಇದ್ದದ್ದು ಕೇವಲ ₹54 ಲಕ್ಷ ಕೋಟಿ. ಮೋದಿ ಅವರು ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ ₹185 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕೇವಲ ಮೋದಿಯವರು ಒಬ್ಬರೇ ತಮ್ಮ ಅವಧಿಯಲ್ಲಿ ₹135 ಲಕ್ಷ ಕೋಟಿ ಸಾಲ ಮಾಡಿಟ್ಟಿದ್ದಾರೆ. ಇದೆಲ್ಲವನ್ನೂ ತೀರಿಸುವ ಜವಾಬ್ದಾರಿ ಭಾರತೀಯರ ತಲೆಗೆ ಬಂದಿದೆ. ಇದೇ ಮೋದಿಯವರ ಕೀರ್ತಿ ಎಂದು ಆರೋಪಿಸಿದ್ದಾರೆ.

ಮೋದಿಯವರು ಭಾರತೀಯರ ಪಾಲಿಗೆ ತಂದ ಕೆಟ್ಟ ದಿನಗಳ ಬಗ್ಗೆ ಯಾವತ್ತೂ ಅವರ ಮನ್ ಕಿ ಬಾತ್ ನಲ್ಲಿ ಮಾತಾಡುವುದಿಲ್ಲ.‌ ರಾಜ್ಯದಲ್ಲೂ ಅಧಿಕಾರ ನಡೆಸಿದ BJP Karnataka ಸರ್ಕಾರ ಕೇವಲ ಲೂಟಿ ಮಾಡಿ ಮನೆ ಸೇರಿದ್ದು ಬಿಟ್ಟರೆ ಅಭಿವೃದ್ಧಿ ಕಡೆ ತಲೆ ಹಾಕಿ ಕೂಡ ಮಲುಗಲಿಲ್ಲ. ಬಿಜೆಪಿ ತನ್ನ ಅವಧಿಯಲ್ಲಿ ಇಡೀ ಸಂಡೂರಿಗೆ ಒಂದೇ ಒಂದು ಮನೆ ಕಟ್ಟಿ ಕೊಡಲಿಲ್ಲ. ಇದನ್ನೆಲ್ಲಾ ನಾನು ಪ್ರಶ್ನಿಸುತ್ತೇನೆ ಎನ್ನುವ ಕಾರಣಕ್ಕೆ, ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಮಾಡಿರುವ ಅನ್ಯಾಯಗಳ ವಿರುದ್ಧ ಬೆಂಗಳೂರಿನಿಂದ ದೆಹಲಿವರೆಗೂ ಹೋಗಿ ಹೋರಾಟ ಮಾಡಿದೆವು ಎನ್ನುವ ಕಾರಣದಿಂದ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ತೊಂದರೆ ಕೊಡುತ್ತಿದ್ದಾರೆ.

ಇದಕ್ಕೆಲ್ಲಾ ಉತ್ತರ ಕೊಡುವ ಕಾಲ ಬಂದಿದೆ. ಈ ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸುತ್ತಾರೆ. ಸಂಡೂರಿನಲ್ಲಿ ಅನ್ನಪೂರ್ಣಮ್ಮ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದರೆ ನನಗೆ ದೊಡ್ಡ ಶಕ್ತಿ ಬರುತ್ತದೆ ಎಂದರು.

BIG NEWS : ಪ್ರಧಾನಿ ಮೋದಿ ಒಬ್ಬರೇ ತಮ್ಮ ಅವಧಿಯಲ್ಲಿ 135 ಲಕ್ಷ ಕೋಟಿ ರೂ. ಸಾಲ ಮಾಡಿಟ್ಟಿದ್ದಾರೆ : CM ಸಿದ್ದರಾಮಯ್ಯ ಆರೋಪ! BIG NEWS: PM Modi alone spent Rs 135 lakh crore in his tenure. Cm Siddaramaiah accuses him of taking loans
Share. Facebook Twitter LinkedIn WhatsApp Email

Related Posts

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

1 Min Read

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

3 Mins Read

BIG NEWS : ಸಚಿವ ಡಿ. ಸುಧಾಕರ್, ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚನೆ

2 Mins Read
Recent News

BREAKING : ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ದಳಪತಿ ವಿಜಯ್ ಪ್ರಮಾಣ ವಚನ ಸ್ವೀಕಾರ | WATCH VIDEO

ತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ್ ಪ್ರಮಾಣವಚನ ಸ್ವೀಕಾರ ಸಮಾರಂಭ - Thalapathy Vijay Swearing-in Ceremony as Tamil Nadu CM

Breaking News: ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ‘ದಳಪತಿ ವಿಜಯ್’ ಅಧಿಕಾರ ಸ್ವೀಕಾರ !

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

State News
KARNATAKA

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ

By kannadanewsnow05 KARNATAKA 1 Min Read

ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ…

ಭಾರತೀಯ ಅರಣ್ಯ ಸೇವೆ ಪರೀಕ್ಷೆಯಲ್ಲಿ ದೇಶಕ್ಕೆ ಪ್ರಥಮ ರ್‍ಯಾಂಕ್ ಸಾಧಿಸಿದ ಬೆಳಗಾವಿಯ ಪ್ರತಿಭೆ ಬಸವರಾಜ ಕೆಂಪವಾಡ

BIG NEWS : ಸಚಿವ ಡಿ. ಸುಧಾಕರ್, ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚನೆ

ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ಸಂಚಾರ ದಟ್ಟಣೆ ತಪ್ಪಿಸಲು ಹಲವಾರು ರಸ್ತೆಗಳು ಬಂದ್; ಸಂಚಾರಿ ಪೊಲೀಸರ ಮಾರ್ಗಸೂಚಿ ಇಲ್ಲಿದೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.