ನವದೆಹಲಿ : ಐಪಿಎಲ್‌ನಲ್ಲಿ 35 ಎಸೆತಗಳಲ್ಲಿ ಶತಕ ಗಳಿಸಿದ 14 ವರ್ಷದ ವೈಭವ್ ಸೂರ್ಯವಂಶಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. ಅವರ ಬ್ಯಾಟಿಂಗ್ ನೋಡಿ ಎಲ್ಲರೂ ಪ್ರಭಾವಿತರಾಗಿದ್ದಾರೆ. ಈಗ ಪ್ರಧಾನಿ ಮೋದಿ ಕೂಡ ಅವರನ್ನು ಸಾಕಷ್ಟು ಹೊಗಳಿದ್ದಾರೆ.
ಪ್ರಧಾನಿ ಮೋದಿ ಹೇಳಿದ್ದೇನು?
ಪಟ್ಲಿಪುತ್ರ ಸ್ಟೇಡಿಯಂನಲ್ಲಿ ನಡೆದ ಖೇಲೋ ಇಂಡಿಯಾ ಯೂತ್ ಗೇಮ್ಸ್ 2025 ರ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವೈಭವ್ ಸೂರ್ಯವಂಶಿ ಬ್ಯಾಟಿಂಗ್ ನೋಡಿದ್ದೇನೆ. ಐಪಿಎಲ್‌ನಲ್ಲಿ ಬಿಹಾರದ ಮಗ ವೈಭವ್ ಸೂರ್ಯವಂಶಿಯ ಅದ್ಭುತ ಪ್ರದರ್ಶನವನ್ನು ನಾವೆಲ್ಲರೂ ನೋಡಿದ್ದೇವೆ. ವೈಭವ್ ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಇಷ್ಟು ದೊಡ್ಡ ದಾಖಲೆಯನ್ನು ಮಾಡಿದ್ದಾರೆ. ಅವರ ಆಟದ ಹಿಂದೆ ಅವರ ಕಠಿಣ ಪರಿಶ್ರಮವಿದೆ, ಆದರೆ ವಿವಿಧ ಹಂತಗಳಲ್ಲಿ ಪಂದ್ಯಗಳನ್ನು ಆಡುವುದು ಸಹ ಅವರಿಗೆ ಸಹಾಯ ಮಾಡಿದೆ. ಇದರರ್ಥ ‘ಒಬ್ಬರು ಹೆಚ್ಚು ಆಡಿದಷ್ಟೂ ಅವರು ಹೆಚ್ಚು ಅಭಿವೃದ್ಧಿ ಹೊಂದುತ್ತಾರೆ’.
14 ವರ್ಷದ ಆಟಗಾರ ಗುಜರಾತ್ ಟೈಟಾನ್ಸ್ (ಜಿಟಿ) ವಿರುದ್ಧದ ತನ್ನ ಮೂರನೇ ಐಪಿಎಲ್ ಪಂದ್ಯದಲ್ಲಿ 35 ಎಸೆತಗಳಲ್ಲಿ ಶತಕ ಗಳಿಸಿದರು ಮತ್ತು ಪುರುಷರ ಟಿ20 ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಅತ್ಯಂತ ಕಿರಿಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರು ಐಪಿಎಲ್‌ನಲ್ಲಿ ಶತಕ ಗಳಿಸಿದ ಅತ್ಯಂತ ವೇಗದ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ, ಆದರೆ ಐಪಿಎಲ್‌ನಲ್ಲಿ ಅತಿ ವೇಗದ ಶತಕ ಗಳಿಸಿದವರಲ್ಲಿ ಕ್ರಿಸ್ ಗೇಲ್ ನಂತರ ಎರಡನೇ ಸ್ಥಾನದಲ್ಲಿದ್ದಾರೆ.
Best wishes to the athletes participating in the Khelo India Youth Games being held in Bihar. May this platform bring out your best and promote true sporting excellence. @kheloindia https://t.co/jlOrc6qO1U
— Narendra Modi (@narendramodi) May 4, 2025