Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಒಂದೇ ದಾಳಿಗೆ ಇರಾನ್‌ನ 48 ಪ್ರಮುಖ ನಾಯಕರು ಫಿನಿಶ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

01/03/2026 9:58 PM

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM

BREAKING: ಇಸ್ರೇಲ್, ಅಮೇರಿಕಾ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಾವು | Ahmadinejad

01/03/2026 8:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪ್ರಧಾನಿ ಮೋದಿ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ : ಸಿಎಂ ಸಿದ್ಧರಾಮಯ್ಯ ಸವಾಲ್!
KARNATAKA

BIG NEWS : ಪ್ರಧಾನಿ ಮೋದಿ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ : ಸಿಎಂ ಸಿದ್ಧರಾಮಯ್ಯ ಸವಾಲ್!

By kannadanewsnow5717/11/2024 7:04 AM

ಮಹಾರಾಷ್ಟ್ರ: ಪ್ರಧಾನಿ ಬರ್ತಾರೆ ಹಸಿ ಹಸಿ ಸುಳ್ಳು ಹೇಳಿ ಹೋಗ್ತಾರೆ. ಅವರ ಆರೋಪ ಸಾಬೀತು ಮಾಡಿದ್ರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ ಅಂತ ಸವಾಲು ಹಾಕಿದ್ದೀನಿ ಎಂಬುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಮಹಾರಾಷ್ಟ್ರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ.

ಶಕ್ತಿ ಯೋಜನೆ: ಇಲ್ಲಿಯವರೆಗೂ ಈ ಗ್ಯಾರಂಟಿಯಿಂದ 325 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ.

ಗೃಹಜ್ಯೋತಿ : ಒಂದು ಕೋಟಿ 62 ಲಕ್ಷ ಕುಟುಂಬಗಳು 200 ಯೂನಿಟ್ ವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದಾರೆ.

ಅನ್ನಭಾಗ್ಯ : ಒಂದು ಕೋಟಿ 20 ಲಕ್ಷ ಕುಟುಂಬಗಳು ಐದು ಕೆಜಿ ಉಚಿತ ಅಕ್ಕಿ ಜೊತೆಗೆ ಐದು ಕೆಜಿ ಅಕ್ಕಿಯ ಬಾಬ್ತು 170 ರೂಪಾಯಿಗಳನ್ನು ತಲಾ ಪಡೆಯುತ್ತಿದ್ದಾರೆ.

ಗೃಹಲಕ್ಷ್ಮಿ: ಒಂದು ಕೋಟಿ 22 ಲಕ್ಷ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು 2,000 ರೂಪಾಯಿ ಗೃಹಲಕ್ಷ್ಮಿ ಹಣ ಪಡೆಯುತ್ತಿದ್ದಾರೆ. ಹೆಚ್ಚೂ ಕಡಿಮೆ ಈ ಗ್ಯಾರಂಟಿಯಿಂದ ಪ್ರತೀ ವರ್ಷ 30 ಸಾವಿರ ಕೋಟಿ ರೂಪಾಯಿ ಹಣ ಮನೆ ಯಜಮಾನಿಯರ ಖಾತೆಗೆ ನೇರವಾಗಿ ಜಮೆ ಆಗುತ್ತಿದೆ

ಯುವನಿಧಿ: ಸರ್ಕಾರ ಬಂದ 8 ತಿಂಗಳೊಳಗೆ ಇದೂ ಸೇರಿ ಎಲ್ಲಾ ಐದು ಗ್ಯಾರಂಟಿಗಳು ಆರಂಭವಾಗಿದ್ದು, ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮೋ ಹೊಂದಿರುವವರು ಯುವನಿಧಿ ಅಡಿಯಲ್ಲಿ ಭತ್ಯೆ ಪಡೆಯುತ್ತಿದ್ದಾರೆ.

ಮಹಾರಾಷ್ಟ್ರ ಬಿಜೆಪಿ ಮುಖಂಡರು ಮತ್ತು ಬಿಜೆಪಿಯ ಮಂತ್ರಿಗಳು ಕರ್ನಾಟಕಕ್ಕೆ ಬಂದು ಪರೀಕ್ಷಿಸಲಿ. ಸುಳ್ಳಾದ್ರೆ ನಾನು ರಾಜಕೀಯ ನಿವೃತ್ತಿ ತಗೊತೀನಿ. ನಿಜ ಆಗಿದ್ರೆ ನೀವು ಮಹಾರಾಷ್ಟ್ರ ಜನತೆಯ ಕ್ಷಮೆ ಕೋರಿ ರಾಜಕೀಯ ನಿವೃತ್ತಿ ಘೋಷಿಸ್ತೀರಾ? ಎಂದು ಪ್ರಶ್ನಿಸಿದರು.

ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೇಸು ದಾಖಲಿಸಲು ನಿರ್ಧರಿಸಿದ್ದೇವೆ. ನಮ್ಮ ಸರ್ಕಾರದ ವಿರುದ್ಧ ಪುಟಗಟ್ಟಲೆ ಸುಳ್ಳು ಜಾಹಿರಾತು ನೀಡಿರುವ ಮಹಾರಾಷ್ಟ್ರ ಬಿಜೆಪಿ ಸರ್ಕಾರದ ವಿರುದ್ಧ ಕೇಸು ದಾಖಲಿಸಲು ನಿರ್ಧರಿಸಿದ್ದೇವೆ ಎಂದರು.

ಕರ್ನಾಟಕ ಪ್ರತೀ ವರ್ಷ 4 ಲಕ್ಷ 50 ಸಾವಿರ ಕೋಟಿಯಷ್ಟು ತೆರಿಗೆಯನ್ನು ಕೇಂದ್ರಕ್ಕೆ ಪಾವತಿಸಿದರೆ, ವಾಪಾಸ್ ರಾಜ್ಯಕ್ಕೆ ಬರುತ್ತಿರುವುದು 60 ಸಾವಿರ ಕೋಟಿ ರೂಪಾಯಿ ಮಾತ್ರ. ಮಹಾರಾಷ್ಟ್ರ ರಾಜ್ಯ ಪ್ರತೀ ವರ್ಷ 8 ಲಕ್ಷ 78 ಸಾವಿರ ಕೋಟಿ ರೂಪಾಯಿ ತೆರಿಗೆ ಕಟ್ಟಿದರೆ ವಾಪಾಸ್ ಬರುತ್ತಿರುವುದು 1 ಲಕ್ಷ 30 ಸಾವಿರ ಕೋಟಿ ಮಾತ್ರ. ಹೀಗಾಗಿ ಮಹಾರಾಷ್ಟ್ರ ಕಟ್ಟುವ ಪ್ರತೀ ಒಂದು ರೂಪಾಯಿ ತೆರಿಗೆಯಲ್ಲಿ 15 ಪೈಸೆಯಷ್ಟನ್ನು, ಕರ್ನಾಟಕ 13 ಪೈಸೆಯಷ್ಟನ್ನು ಮಾತ್ರ ವಾಪಾಸ್ ಪಡೆಯುತ್ತಿದೆ ಎಂದರು.

ಕೇಂದ್ರದ ಮೋದಿ ಸರ್ಕಾರ ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳಿಗೂ ಅನ್ಯಾಯ ಮಾಡುತ್ತಿದೆ. ಗ್ಯಾರಂಟಿಗಳ ಜಾರಿಯಿಂದ ಆರ್ಥಿಕತೆ ನಾಶವಾಗುತ್ತದೆ ಎಂದು ಮೋದಿ ಭಾಷಣ ಮಾಡಿದ್ದಾರೆ. ಆದರೆ, ಇದೇ ಬಿಜೆಪಿ ಮಹಾರಾಷ್ಟ್ರ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿದೆ. ಮಧ್ಯಪ್ರದೇಶ ಚುನಾವಣೆಯಲ್ಲೂ ಗ್ಯಾರಂಟಿಗಳನ್ನು ಘೋಷಿಸಿತ್ತು. ಮೋದಿ ಯಾಕೆ ಈ ಮಟ್ಟದ ಸುಳ್ಳು ಹೇಳುತ್ತಾರೆ? ಎಂದರು.

ಕರ್ನಾಟಕ ರಾಜ್ಯದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮ, ಎಲ್ಲಾ ವರ್ಗದವರೂ ನಮ್ಮ ಗ್ಯಾರಂಟಿಗಳ ಅನುಕೂಲ ಪಡೆಯುತ್ತಿದ್ದಾರೆ. ಮಹಾರಾಷ್ಟ್ರ ಸರ್ಕಾರ ಸಾಮಾಜಿಕವಾಗಿ, ಆರ್ಥಿಕವಾಗಿ ದೊಡ್ಡ ರಾಜ್ಯ. ಆದ್ದರಿಂದ ಇಲ್ಲಿ ಕಾಂಗ್ರೆಸ್ ಮತ್ತು ಮಹಾ ವಿಕಾಸ್ ಆಘಾಡಿ ಒಕ್ಕೂಟ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡುತ್ತಾರೆ. ಅನುಮಾನ ಬೇಡ ಎಂದರು.

ಮೋದಿ ಸರ್ಕಾರ ರೈತರ ಒಂದು ರೂಪಾಯಿ ಸಾಲವನ್ನೂ ಮನ್ನಾ ಮಾಡಲಿಲ್ಲ. ಶ್ರೀಮಂತ ಉದ್ಯಮಿಗಳ 16 ಲಕ್ಷ ಕೋಟಿ ರೂಪಾಯಿ ಸಾಲವನ್ನು ಮಾತ್ರ ಮನ್ನಾ ಮಾಡಿದೆ. ಆದ್ದರಿಂದ ಬಿಜೆಪಿ ಮತ್ತು ಮೋದಿ ಕೇವಲ ಅತ್ಯಂತ ಶ್ರೀಮಂತರ ಪರವಾಗಿದೆ ಎನ್ನುವುದು ಸಾಬೀತಾಗಿದೆ.

ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ರೈತರ ₹8,165 ಕೋಟಿ ಸಾಲ ಮನ್ನಾ ಮಾಡಿದ್ದೇನೆ. ಮನಮೋಹನ್ ಸಿಂಗ್ ಅವರು ಪ್ರಧಾನಿ ಆದಾಗ ಭಾರತದ ರೈತರ 76 ಸಾವಿರ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದ್ದರು.

ಆದ್ದರಿಂದ ಮಹಾರಾಷ್ಟ್ರ ಜನತೆ ಮಹಾ ವಿಕಾಸ್ ಅಘಾಡಿಯನ್ನು ಗೆಲ್ಲಿಸುವ ಮೂಲಕ ಮಹಾರಾಷ್ಟ್ರದ ಅಭಿವೃದ್ಧಿ ಮತ್ತು ಮಹಾರಾಷ್ಟ್ರದ ಜನತೆಯ ಆರ್ಥಿಕ ಪ್ರಗತಿಗೆ ಕಾರಣರಾಗಬೇಕು ಎಂದು ವಿನಂತಿಸುತ್ತೇನೆ.

BREAKING: ಬೆಂಗಳೂರಲ್ಲಿ ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರು: ವ್ಯಕ್ತಿ ಸಜೀವ ದಹನ

ಬಾಕ್ಸಿಂಗ್ ದಂತಕಥೆ ‘ಮೈಕ್ ಟೈಸನ್’ ಸೋಲಿಸಿದ ‘ಜೇಕ್ ಪಾಲ್’ಗೆ ಗೆದ್ದ ಬಹುಮಾನವೆಷ್ಟು ಗೊತ್ತಾ.?

BIG NEWS : ಪ್ರಧಾನಿ ಮೋದಿ ಆರೋಪ ಸಾಬೀತು ಮಾಡಿದ್ರೆ ರಾಜಕೀಯ ನಿವೃತ್ತಿ : ಸಿಎಂ ಸಿದ್ಧರಾಮಯ್ಯ ಸವಾಲ್! BIG NEWS: PM Modi will retire from politics if he proves the allegations: CM Siddaramaiah challenge!
Share. Facebook Twitter LinkedIn WhatsApp Email

Related Posts

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM4 Mins Read

ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!

01/03/2026 8:29 PM2 Mins Read

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM1 Min Read
Recent News

BREAKING: ಒಂದೇ ದಾಳಿಗೆ ಇರಾನ್‌ನ 48 ಪ್ರಮುಖ ನಾಯಕರು ಫಿನಿಶ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

01/03/2026 9:58 PM

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

01/03/2026 9:36 PM

BREAKING: ಇಸ್ರೇಲ್, ಅಮೇರಿಕಾ ದಾಳಿಯಲ್ಲಿ ಇರಾನ್ ಮಾಜಿ ಅಧ್ಯಕ್ಷ ಮಹಮೂದ್ ಅಹ್ಮದಿನೆಜಾದ್ ಸಾವು | Ahmadinejad

01/03/2026 8:41 PM

US Israel Iran War: ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್: ಕೇವಲ 12 ಗಂಟೆಗಳಲ್ಲಿ 900ಕ್ಕೂ ಹೆಚ್ಚು ದಾಳಿ!

01/03/2026 8:36 PM
State News
KARNATAKA

‘ಗ್ರಾಮ ವಾಸ್ತವ್ಯ’ದ ಮೂಲಕ ‘ಜನಸ್ನೇಹಿ ಪೊಲೀಸ್ ವ್ಯವಸ್ಥೆ’ಗೆ ನಾಂದಿ: ಎಲ್ಲರಿಗೂ ಮಾದರಿಯಾದ ‘PSI’

By kannadanewsnow0901/03/2026 9:36 PM KARNATAKA 4 Mins Read

ಶಿವಮೊಗ್ಗ: ಸಾಮಾನ್ಯವಾಗಿ ಪೊಲೀಸ್ ಎಂದರೆ ಸಾಮಾನ್ಯ ಜನರಿಗೆ ಒಂದು ರೀತಿಯ ಭಯ, ಆತಂಕ. ಪೊಲೀಸರ ಬಳಿ ಹೋಗುವುದು ಎಂದರೆ ಏನೋ…

ವಸತಿ ಶಾಲೆಯಲ್ಲಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಗಂಡ-ಹೆಂಡತಿ ಜೈಲುಪಾಲು!

01/03/2026 8:29 PM

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM

ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಧನುಸ್ಸು ರಾಶಿಯವರಿಗೆ ಅದೃಷ್ಟದ ಬದಲಾವಣೆ

01/03/2026 7:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.