ಬೆಂಗಳೂರು : ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ತೆರವು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಲಿದೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾದ ದೂರು ರದ್ದು ಮತ್ತು ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ, ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ಗುರುವಾರ ಹೈಕೋರ್ಟ್ ನಲ್ಲಿ ನಡೆಯಲಿದೆ.
ಡಿಸೆಂಬರ್ 10 ರಂದು ನಡೆದ ವಿಚಾರಣೆಯಲ್ಲಿ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟಿನ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಡಿಸೆಂಬರ್ 12ರಂದು ಮಧ್ಯಾಹ್ನ 3:30ಕ್ಕೆ ಮಂದೂಡಿ ಆದೇಶ ಹೊರಡಿಸಿದ್ದರು. ಇಂದು ಪೋಕ್ಸೋ ಪ್ರಕರಣದ ವಿಚಾರಣೆ ನಡೆಯಲಿದೆ.