ಯಾದಗಿರಿ : ಬಾಲಕಿ ಜೊತೆಗೆ ಅನುಚಿತ ವರ್ತನೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮಲ್ಲಿಕಾರ್ಜುನ ಮುತ್ಯ ವಿರುದ್ಧ ಪೋಕ್ಸೋ ಕೇಸ್ ದಾಖಲು ವಿಚಾರವಾಗಿ ಯಾದಗಿರಿನಲ್ಲಿ ಮಲ್ಲಿಕಾರ್ಜುನ ಮುಕ್ತಿಯ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ವಾದ ಪ್ರತಿವಾದ ಆಲಿಸಿ, ಮಾರ್ಚ್ 9ಕ್ಕೆ ಕೋರ್ಟ್ ಆದೇಶ ಕಾಯ್ದಿರಿಸಿ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆ
ಏಳು ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವ ವಿಡಿಯೋ ವಿಡಿಯೋ ವೈರಲ್ ಆಗಿದ್ದು, ಆತನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಈ ಪ್ರಕರಣ ದಾಖಲಿಸಲಾಗಿದೆ. ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.
ಈ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಯಾದಗಿರಿ ಪೊಲೀಸ್ ವರಿಷ್ಠಾಧಿಕಾರಿಗೆ ಆಯೋಗ ಪತ್ರ ಬರೆದಿದಿತ್ತು. ಬಳಿಕ ಮಲ್ಲಿಕಾರ್ಜನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. 26 ವರ್ಷದ ಮುತ್ಯಾ ಅಪ್ರಾಪ್ತ ಬಾಲಕಿಯನ್ನು ಹಿಡಿದುಕೊಂಡು ಆಕೆಯ ಪೋಷಕರ ಸಮ್ಮುಖದಲ್ಲಿ ಅನುಚಿತವಾಗಿ ಸ್ಪರ್ಶಿಸಿ ಚುಂಬಿಸುತ್ತಿರುವುದನ್ನು ಈ ವಿಡಿಯೋದಲ್ಲಿ ತೋರಿಸಲಾಗಿದೆ.
ಈ ಮಧ್ಯೆ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಅರೆಸ್ಟ್ ಆಗುವ ಭೀತಿಯಿಂದ ಮಲ್ಲಿಕಾರ್ಜುನ ಮುತ್ಯಾ ಪರಾರಿಯಾಗಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್ ಮಾಡಿದ್ದಾರೆ. ವಿಡಿಯೋದಲ್ಲಿ ನನ್ನ ಶ್ರೀಮಠದ ಭಕ್ತಾದಿಗಳೇ ಯಾವುದೇ ಆತಂಕ ಪಡಬೇಡಿ, ನಾನು ಇಲ್ಲೇ ಲೋಕಲ್ ಅಲ್ಲೇ ಇದ್ದೀನಿ, ಮಠದಲ್ಲಿ ಸಾಮೂಹಿಕ ಮದುವೆ ಇದ್ದ ಕಾರಣ ಕಾರ್ಡ್ ಕೊಡಲು ಬಂದಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ಇದೇ ವಿಡಿಯೋದಲ್ಲಿ ಪ್ರಕರಣ ಬಗ್ಗೆ ಮಾತನಾಡಿರುವ ಮಲ್ಲಿಕಾರ್ಜುನ ಮುತ್ಯಾ, ಪೊಲೀಸ್ ಸಿಬ್ಬಂದಿ ಕರೆ ನೀಡಿದ್ದಾರೆಂಬುದು ಕೇಳಿದ್ದೇನೆ. ಖಂಡಿತ ಪೊಲೀಸ್ ಅಧಿಕಾರಿಗಳು ನಾನು ಯಾವಾಗ ಬಾ ಅಂತಾರೆ ಆಗ ನಾನು ಹೋಗಲು ಸಿದ್ಧನಿದ್ದೇನೆ. ಈ ವಿಷಯದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ, ನೀವು ಆತಂಕಪಡಬೇಡಿ ಎಂದು ಮಲ್ಲಿಕಾರ್ಜುನ ಮುತ್ಯಾ ವಿಡಿಯೋ ರಿಲೀಸ್ ಮಾಡಿದ್ದಾರೆ.








