ಬೆಂಗಳೂರು : ಬೆಂಗಳೂರಿನಲ್ಲಿ ಪೋಕ್ಸೋ ಪ್ರಕರಣವೊಂದು ದಾಖಲಾಗಿದ್ದು, ದೇವಸ್ಥಾನಕ್ಕೆ ಬಂದ ಬಾಲಕಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಅರ್ಚಕನ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ವಿದ್ಯಾರಣ್ಯಪುರ ಸಮೀಪದ ದೇವಾಲಯದ ಅರ್ಚಕ ಪ್ರಕಾಶ್ ಆರಾಧ್ಯ ದೇವಾಲಯಕ್ಕೆ ಬಂದಿದ್ದ 7 ವರ್ಷದ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ವಿದ್ಯಾರಣ್ಯಪುರ ಠಾಣೆ ಪೋಲೀಸರು ಬಂಧಿಸಿದ್ದಾರೆ.
ಎರಡು ದಿನಗಳ ಹಿಂದೆ ಬಾಲಕಿ ದೇವಾಲಯಕ್ಕೆ ತೆರಳಿದ್ದಾಗ ಕೃತ್ಯ ನಡೆದಿದೆ. ಬಾಲಕಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದ ಬಗ್ಗೆ ಪೋಷಕರು ದೂರು ನೀಡಿದ್ದರು. ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.